ರಾಜ್ಯದಲ್ಲಿ ಆರ್ಥಿಕ ಸಂಕಷ್ಟ : ಮನೆ ಬಾಡಿಗೆಯಿಂದ ವಿನಾಯಿತಿ ಘೋಷಿಸಿ : ಮೋದಿಗೆ ಹೆಚ್ ಡಿಕೆ ಮನವಿ

ದೇಶಾದ್ಯಂತ ಲಾಕ್ ಡೌನ್ ನಿಂದಾಗಿ ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಜನ ಸಂಕಷ್ಟದಲ್ಲಿದ್ದಾರೆ. ಇದಕ್ಕೆ ಊಟ, ಆಹಾರ ಧಾನ್ಯ ಹಾಗೂ ಹಣ ನೀಡಿದರೆ ಮಾತ್ರ ಸಾಲದು. ಬಾಡಿಗೆದಾರರಿಗೆ ವಿನಾಯಿತಿ ನೀಡಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ದೇಶದ ಪ್ರಧಾನಿ ನರೇಂದ್ರ ಮೋದಿ ಬಳಿ ಮನವಿ ಮಾಡಿದ್ದಾರೆ.

ಪಡಿತರ, ಬ್ಯಾಂಕ್ ಸಾಲ, ಇನ್ನಿತರ ಸಾಲ ಹಾಗೂ ಮನೆ ಬಾಡಿಗೆ ಹೀಗೆ ಉದ್ಯೋಗ ಇಲ್ಲದೇ ಇದನ್ನೆಲ್ಲ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಲಾಕ್ಜ ಡೌನ್ ನಿಂದಾಗಿ ಸಾಮಾನ್ಯರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇದರ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.

ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಅನೇಕ ದೇಶಗಳು ಕೊರೊನ ಸಂಕಟದ ಅವಧಿಗೆ ಬಾಡಿಗೆ ವಿನಾಯಿತಿಯನ್ನು ಘೋಷಿಸಿವೆ. ದೆಹಲಿಯ ಸರ್ಕಾರ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಯೋಜನೆ ಘೋಷಿಸಿದೆ. ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ನೀಡಬೇಕು ಎಂದು ಟ್ವಿಟ್ ಮೂಲಕ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

 

 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights