ರಾಜ್ಯದಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ : ಇಂದು 8 ಹೊಸ ಪ್ರಕರಣ ಪತ್ತೆ!

ಇನ್ನೇನು ಕೆಲವೇ ದಿನಗಳ ನಂತರ ಲಾಕ್ ಡೌನ್ ಅವಧಿ ಪೂರ್ಣಗೊಳ್ಳುತ್ತದೆ. ಆದರೂ ಕೊರೊನಾ ಸೋಂಕಿತರ ಸಂಖ್ಯೆ ಮಾತ್ರ ನಿಯಂತ್ರಣಕ್ಕೆ ಬಂದಿಲ್ಲ.

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 511ಕ್ಕೇರಿದೆ. ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ, ನಿನ್ನೆ ಸಂಜೆಯಿಂದ ಇಂದು ಮಧ್ಯಾಹ್ನದವರೆಗೆ ಕರ್ನಾಟಕದಲ್ಲಿ ಇಂದು 8 ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯದ ನಾಗಮಂಗಲದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದೆ. 50 ವರ್ಷದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿದೆ. ಆತ ಮುಂಬೈಗೆ ಹೋಗಿ ಬಂದಿದ್ದ ಎನ್ನಲಾಗಿದೆ. ಆತನ ಸಂಪರ್ಕದಲ್ಲಿರುವವರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.

ಇನ್ನು ದಕ್ಷಿಣ ಕನ್ನಡದಲ್ಲಿ ಇಂದು 2 ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಒಂದು ಹೊಸ ಪ್ರಕರಣ ಬೆಳಕಿಗೆ ಬಂದಿದೆ. ಬಾಗಲಕೋಟೆಯಲ್ಲಿ 2 ಪ್ರಕರಣ ಹಾಗೂ ವಿಜಯಪುರದಲ್ಲಿ ಎರಡು ಪ್ರಕರಣ ಬೆಳಕಿಗೆ ಬಂದಿದೆ.

ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್​ಡೌನ್​ ಮುಗಿಯಲು ಕೇವಲ 6 ದಿನಗಳ ಬಾಕಿ ಇವೆ. ಆದರೂ ಇನ್ನೂ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಇಂದು ಬೆಳಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿದ್ದ ಕೊರೋನಾ ಸೋಂಕಿತನೋರ್ವ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ. ರಾಜ್ಯದಲ್ಲಿ ಈಗಾಗಲೇ 20 ಜನರು ಸಾವನ್ನಪ್ಪಿದ್ದಾರೆ.

ಇಂದು ಪತ್ತೆಯಾದ ಕೊರೋನಾ ಸೋಂಕಿತರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 80 ವರ್ಷದ ವೃದ್ಧೆ ಕೂಡ ಸೇರಿದ್ದಾರೆ. ಇವರಿಗೆ ಕುಟುಂಬದ ಸೋಂಕಿತರಿಂದ ಕೊರೋನಾ ಹರಡಿದೆ. ರಾಜ್ಯದಲ್ಲಿ ಇಂದು 8 ಹೊಸ ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿದ್ದಾರೆ.

https://twitter.com/sriramulubjp/status/1254666666161537024

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights