ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದುವರೆದ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧ ಹೋರಾಟ…

ದೇಶದಾದ್ಯಂತ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿ ಪ್ರತಿಭಟನೆಗಳು ಇಂದಿಗೂ ಮುಂದುವರೆದಿವೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿಯೂ ಕೂಡ ಬೃಹತ್ ಪ್ರತಿಭಟನೆಗಳನ್ನ ಕೈಗೊಳ್ಳಲಾಗುತ್ತಿದೆ.

ಮಂಗಳೂರು :-

ಎನ್‌ಆರ್‌ಸಿ ಮತ್ತು ಸಿಎಎ ವಿರೋಧಿಸಿ ಹಾಗೂ ಮಂಗಳೂರು ಗೋಲಿಬಾರ್ ಖಂಡಿಸಿ ಮಡಿಕೇರಿಯಲ್ಲಿ ಮುಸ್ಲಿಂ ಜಮಾಅತ್ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಾವಿರಾರು ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲಾ ಪೊಲೀಸ್ ಕಟ್ಟೆಚ್ಚರ ವಹಿಸಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕೊಡಗಿಗೆ ಬರುವ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ವಿರಾಜಪೇಟೆ, ಸೋಮವಾರಪೇಟೆ, ಮೈಸೂರು ಮತ್ತು ಮಂಗಳೂರಿನಿಂದ ಬರುವ ಎಲ್ಲಾ ವಾಹನಗಳನ್ನು ಸಂಪೂರ್ಣ ತಪಾಸಣೆ ಮಾಡಲಾಗುತ್ತಿದೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯುತ್ತಿದ್ದು ಪೊಲೀಸ್ರು ಹದ್ದಿನ ಕಣ್ಣಿನಿಟ್ಟಿದ್ದಾರೆ. ಗಾಂಧಿ ಮೈದಾನ ಸೇರಿದಂತೆ ಮಡಿಕೇರಿಯ ನಗರಾದ್ಯಂತ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ವಿಫುಲ್ ಕುಮಾರ್ ಭೇಟಿ ನೀಡಿದ್ದು ಕಟ್ಟೆಚ್ಚರ ವಹಿಸುವಂತೆ ಪೊಲೀಸ್ರಿಗೆ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿ :-
ಇನ್ನೂ ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಗಳಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ.
ಅಂಬೇಡ್ಕರ್ ವೃತ್ತದಿಂದ ನೆಹರು ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಪ್ರತಿಭಟನಾಕಾರರು  ಸಿಎಎ, ಎನ್‌ಆರ್‌ಸಿ ಕೈಬಿಡುವಂತೆ ಘೋಷಣೆ ಕೂಗುತ್ತಿದ್ದಾರೆ. ರಾಷ್ಟ್ರಧ್ವಜಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದು, ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಸಾರಿಗೆ ಸಂಸ್ಥೆ ಬಿಆರ್‌ಟಿಎಸ್ ಸಾರಿಗೆ ಸೇವೆ ಸ್ಥಗಿತಗೊಳಿಸಿದೆ.

ರಾಮನಗರ :-

ಜೊತೆಗೆ ರಾಮನಗರದಾಂದ್ಯತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಡು ಮಾಡಲಾಗಿದ್ದು, ನಗರದ ರೈಲ್ವೆ ಸ್ಟೇಷನ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಜಾಥ ಕೈಗೊಳ್ಳಲಾವುದು. 3 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದ್ದು,  ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗುವ ಪ್ರತಿಭಟನಾ ಜಾಥದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಕ್ಷೇತ್ರದ ಶಾಸಕಿ ಅನಿತಾಕುಮಾರಸ್ವಾಮಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಯಾವುದೇ ಗಲಾಟೆ, ಗಲಭೆ ನಡೆಯದಂತೆ ಶಾಂತಿಯುತ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ.

ಬಾಗಲಕೋಟೆ:-

ಮುಧೋಳದಲ್ಲಿ ಪೌರತ್ವ ಕಾಯ್ದೆ ಎನ್ ಆರ್ ಸಿ ವಿರೋಧಿಸಿ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಪ್ರತಿಭಟನಾ ರ್ಯಾಲಿ ಬಳಿಕ ಮುಧೋಳ ತಹಶೀಲ್ದಾರ್ ಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದ್ದಾರೆ. ಮುಧೋಳ ನಗರದ ಅಂಬೇಡ್ಕರ್ ಸರ್ಕಲ್ ನಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದ್ದು, ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನಾ ರ್ಯಾಲಿ ಪಾಲ್ಗೊಂಡಿದ್ದಾರೆ.ತಹಶೀಲ್ದಾರ್ ಸಂಗಮೇಶ್ ಬಾಡಗಿಯವರಿಗೆ ಮನವಿ ಸಲ್ಲಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights