ರಾಜ್ಯದ ವಲಸೆ ಕಾರ್ಮಿಕರಿಗೆ ಇಂದಿನಿಂದ 3 ದಿನ ಉಚಿತ ಬಸ್ ಸೇವೆ..!

ರಾಜ್ಯದ ವಲಸೆ ಕಾರ್ಮಿಕರಿಗೆ ಇಂದಿನಿಂದ 3 ದಿನ ಉಚಿತ ಬಸ್ ಸೇವೆಯನ್ನು ಕಲ್ಪಿಸಿ ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಹೌದು… ರಾಜ್ಯದ ವಲಸೆ ಕಾರ್ಮಿಕರಿಗೆ ದುಪ್ಪಟ್ಟು ಹಣ ಕೊಟ್ಟು ಟಿಕೆಟ್ ಖರೀದಿ ಮಾಡಿ ತಮ್ಮ ಊರುಗಳಿಗೆ ತೆರಳುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಕ್ಕೆ ರಾಜ್ಯದಲ್ಲಿ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಕಾರ್ಮಿಕರಿಂದ ರಾಜ್ಯ ಸರ್ಕಾರ ಸುಲಿಗೆ ಮಾಡ್ತಾಯಿದೆ ಎನ್ನುವ ಆರೋಪ ಮಾಡಲಾಗಿತ್ತು. ಇದಕ್ಕೆ ಎಚ್ಚೆತ್ತುಕೊಂಡ ಸರ್ಕಾರ ಟಿಕೆಟ್ ದರ ಕಡಿಮೆ ಮಾಡಿತ್ತು. ಆದರೆ ಅಂದೇ ದುಡಿದು ಅಂದೆ ಊಟ ಮಾಡುವ ಕುಟುಂಬಗಳ ಬಳಿ ಅಷ್ಟೋಂದು ಹಣ ಎಲ್ಲಿಂದ ಬರುತ್ತೆ ಅನ್ನೋ ಪ್ರಶ್ನೆಗಳು ಹೊರಬೀಳುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ.

ಹೀಗಾಗಿ ಸಿಎಂ ಯಡಿಯೂರಪ್ಪ ಕಾರ್ಮಿಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇಂದಿನಿಂದ 3 ದಿನಗಳ ವರೆಗೆ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣ ಮಾಡುವ ವಲಸೆ ಕಾರ್ಮಿಕರ ಟಿಕೆಟ್ ರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಸಲಾಗಿದೆ.  ಯಾರೋಬ್ಬರಲ್ಲೂ ಹಣ ತೆಗೆದುಕೊಳ್ಳುವಂತಿಲ್ಲ. ಈಗಾಗಲೇ ಈ ಸಂದೇಶ ಎಲ್ಲಾ ಬಸ್ ನಿಲ್ದಾಣಗಳಿಗೂ ರವಾನೆ ಮಾಡಲಾಗಿದೆ.

ರಾಜ್ಯದ 12 ಹಸಿರು ವಲಯ ಜಿಲ್ಲೆಗಳಲ್ಲಿ ಸೋಮವಾರದಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಆದರೆ ಜಿಲ್ಲೆಯ ಒಳಗೆ ಮಾತ್ರ ಬಸ್‍ಗಳು ಸಂಚರಿಸಲಿವೆ. ಅಂತರ್ ಜಿಲ್ಲೆಯ ಬಸ್ ಸಂಚಾರ ಇರುವುದಿಲ್ಲ. ಕೊಪ್ಪಳ, ಚಿತ್ರದುರ್ಗ, ಚಾಮರಾಜನಗರ, ಕೋಲಾರ, ರಾಮನಗರ, ಹಾವೇರಿ, ಹಾಸನ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ನಾಳೆಯಿಂದ ಆರಂಭವಾಗಲಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights