ರಾಜ್ಯದ ಹಲವೆಡೆ ಭಾರಿ ಮಳೆ : ಚಿಕ್ಕಮಗಳೂರಿನಲ್ಲಿ ಸಿಡಿಲು ಬಡಿದು ಮೂವರು ಸಾವು!

ರಾಜ್ಯದ ಹಲವೆಡೆ ಉರಿ ಬಿಸಿಲಿನ ನಡುವೆ ವರುಣ ತಂಪೆರೆದಿದ್ದಾನೆ. ರಾಜ್ಯದ ಕೆಲ ಭಾಗಗಳಲ್ಲಿ ನಿನ್ನೆ ಗುಡುಗು, ಸಿಡಿಲು, ಗಾಳಿ ಸಮೇತ ಭಾರಿ ಮಳೆಯಾಗಿದೆ.

ಹೌದು… ರಾಜ್ಯದಲ್ಲಿ ಶಿವಮೊಗ್ಗ, ಬಾಗಲಕೋಟೆ, ವಿಜಾಪುರ, ರಾಯಚೂರು, ಚಿಕ್ಕಮಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ. ಒಂದೆರೆಡು ಗಂಟೆಗಳ ಕಾಲ ಸುರಿದ ಮಳೆಗೆ ಚಿಕ್ಕಮಗಳೂರಿನಲ್ಲಿ ಜನ ತತ್ತರಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ವರುಣ ಅಬ್ಬರಿಸಿದ್ದಾನೆ. ಜಿಲ್ಲೆಯಲ್ಲಿ ಆಲಿ ಕಲ್ಲು ಮಳೆಯಾಗಿದೆ. ತರೀಕೆರೆ ಸುತ್ತಮುತ್ತಲೂ ಇಂದು ಸಂಜೆ ನಿರಂತರವಾಗಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿದಿದೆ. ಮಳೆಯಿಂದ ರಸ್ತೆ ಬದಿ ಮರಗಳು ಧರೆಗೆ ಉರುಳಿ ಬಿದ್ದಿವೆ. ಗಾಳಿ ಮಳೆಯ ಆರ್ಭಟದಿಂದಾಗಿ ಜನರೂ ಆತಂಕಗೊಂಡಿದ್ದಾರೆ.

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಹಿತ್ಲುಮಕ್ಕಿ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಮಹಿಳಾ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜ್ಯೋತಿ (28), ಮಾದಮ್ಮ(65), ಮಾರಿ (27) ಮೃತ ದುರ್ದೈವಿಗಳು. ಮೃತರು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನ ಇವರು ಕೂಲಿ ಕೆಲಸಕ್ಕೆಂದು ಇಲ್ಲಿಗೆ ಬಂದಿದ್ದರು ಎಂದು ತಿಳಿದುಬಂದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights