ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ತೇಜಸ್ವಿನಿ, ಕಾಂಗ್ರೆಸ್ನಿಂದ ಖರ್ಗೆ; ದೇವೇಗೌಡರ ಕತೆ ಏನು?
ರಾಜ್ಯಸಭೆ ಚುನಾವಣೆಯನ್ನು ಜೂನ್ 19 ರಂದು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದ್ದು, ಜೂನ್ 9 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಹೇಳಿದೆ.
ಚುನಾವಣೆಗೆ ಇನ್ನು ಕೇವಲ 2 ವಾರಗಳು ಮಾತ್ರ ಬಾಕಿಯಿವೆ. ಕರ್ನಾಟಕದಲ್ಲಿ ಮೂರು ಪಕ್ಷಗಳು ಚುನಾವಣಾ ಅಭ್ಯರ್ಥಿಗಳನ್ನು ಗುರುತಿಸಿದ್ದು, ಬಿಜೆಪಿಯಿಂದ ತೇಜಸ್ವಿನಿ ಅನಂತ್ ಕುಮಾರ್, ಕಾಂಗ್ರೆಸ್ ನಿಂದ ಖರ್ಗೆ ಹಾಗೂ ಜೆಡಿಎಸ್ ನಿಂದ ದೇವೇಗೌಡರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ವಿಧಾನಭೆಯಲ್ಲಿರುವ ಬಲಾಬಲದ ಮೇಲೆ ಬಿಜೆಪಿ 2 ಸ್ಥಾನ ಗೆಲ್ಲಲಿದೆ. ಕಾಂಗ್ರೆಸ್ 1 ಸ್ಥಾನ ಗಳಿಸಲಿದೆ. ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದಾದರೇ ಕಾಂಗ್ರೆಸ್ ನಾಲ್ಕನೇ ಸೀಟ್ ಪಡೆಯುವ ಸಾಧ್ಯತೆಯಿದೆ.
ಬಿಜೆಪಿ ಇನ್ನೂ ತನ್ನ ಅಭ್ಯರ್ಥಿ ಯಾರೆಂದು ನಿರ್ಧರಿಸಿಲ್ಲವಾದರೂ, ಕಳೆದ ಲೋಕಸಭೆ ಚುನಾವಣೆಲ್ಲಿ ಟಿಕೆಟ್ ವಂಚಿತವಾಗಿದ್ದ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅವರ ಹೆಸರು ಕೇಳಿ ಬರುತ್ತಿದೆ.
ಇನ್ನೂ ಆರ್ಎಸ್ಎಸ್ ಮೂಲದ ಪ್ರಭಾಕರ್ ಕೋರೆ ಅವರನ್ನು ಕಣಕ್ಕಳಿಸಬೇಕೆಂದು ಒತ್ತಡ ಕೇಳಿ ಬರುತ್ತಿದ್ದರೇ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಳೀಧರ್ ರಾವ್ ಅವರು ಕರ್ನಾಟಕದಿಂದ ಆಯ್ಕೆ ಬಯಸಿದ್ದಾರೆ ಎನ್ನಲಾಗಿದೆ. ಆದರೆ ಸಿಎಂ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಘಟಕದ ಜೊತೆ ಚರ್ಚಿಸಿ ಬಿಜೆಪಿ ಕೋರ್ ಕಮಿಟಿ ಸಮಿತಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಹೆಸರು ಕೂಡ ಕೇಳಿ ಬರುತ್ತಿದೆ. ಆದರೆ ಈ ಸಂಬಂಧ ಪಕ್ಷ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ದೇವೇಗೌಡರ ಹೆಸರು ಕೇಳಿ ಬರುತ್ತಿದೆ. ಜೆಡಿಎಸ್ನಲ್ಲಿ 34 ಶಾಸಕರಿದ್ದು, ದೇವೇಗೌಡರ ಗೆಲುವಿಗೆ ಕಾಂಗ್ರೆಸ್ ಬೆಂಬಲ ಬಕಾಗಿದೆ.
ರಾಜ್ಯಸಭೆಗೆ ಅಯ್ಕೆಯಾಗಬೇಕಾದರೆ ಪ್ರತಿ ಅಭ್ಯರ್ಥಿಗೆ 45 ಶಾಸಕರು ಮತ ಹಾಕಬೇಕು. ವಿಧಾನಸಭೆಯಲ್ಲಿ 34 ಸದಸ್ಯರನ್ನು ಹೊಂದಿರುವ ಜೆಡಿಎಸ್, ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್ ಅನ್ನು ಬೆಂಬಲಿಸಬಹುದಾದ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

