‘ರೇಪ್ ಇನ್ ಇಂಡಿಯಾ’ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ತೀವ್ರ ಪ್ರತಿಭಟನೆ

ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ರಾಹುಲ್ ಗಾಂಧಿಯವರ ‘ರೇಪ್ ಇನ್ ಇಂಡಿಯಾ’ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಇಂದು ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲಿಯೂ ತೀವ್ರ ಪ್ರತಿಭಟನೆ ನಡೆದಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದ್ದರೆ ರಾಜನಾಥ್‌ ಸಿಂಗ್‌ ಲೋಕಸಭೆಯಲ್ಲಿ ಗುಡುಗಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಹೇಳಿಕೆಗೆ ಬದ್ಧನಾಗಿದ್ದೇನೆ, ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ. ಈ ಹಿಂದೆ ದೆಹಲಿ ದೇಶದ ಅತ್ಯಾಚಾರದ ರಾಜಧಾನಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ವಿಡಿಯೋ ನನ್ನ ಬಳಿ ಇದೆ. ಅದನ್ನು ಟ್ವೀಟ್‌ ಮಾಡುತ್ತೇನೆ ಎಲ್ಲರಿಗು ತಿಳಿಯಲಿ. ಪೌರತ್ವ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಡೆಯುತ್ತಿರವು ದೊಡ್ಡ ಪ್ರತಿಭಟನೆಗಳಿಂದ ಜನರ ಮನಸನ್ನು ಬೇರೆಡೆಗೆ ತಿರುಗಿಸಲು ಬಿಜಿಪಿ ಷಡ್ಯಂತ್ರ ರೂಪಿಸಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಈ ರೀತಿಯ ಹೇಳಿಕೆಗಳನ್ನು ನೀಡುವ ವ್ಯಕ್ತಿ ಈ ಸದನದ ಸದಸ್ಯನಾಗಿರಲು ಸಾಧ್ಯವಿಲ್ಲ ಎಂದು ರಾಜನಾಥ್‌ ಸಿಂಗ್‌ ಆಕ್ರೋಶ ವ್ಯಕ್ತಿಪಡಿಸಿದ್ದರು.

“ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ನಾಯಕ ಭಾರತೀಯ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಬೇಕೆಂದು ಸ್ಪಷ್ಟ ಕರೆ ನೀಡುತ್ತಿದ್ದಾನೆ. ಇದು ದೇಶದ ಜನರಿಗೆ ರಾಹುಲ್ ಗಾಂಧಿಯವರ ಸಂದೇಶವೇ? ಅವರಿಗೆ ಶಿಕ್ಷೆಯಾಗಬೇಕು” ಎಂದು ಸ್ಮೃತಿ ಇರಾನಿ ಲೋಕಸಭೆಯಲ್ಲಿ ಹೇಳಿದರು.

ರಾಜ್ಯಸಭೆಯಲ್ಲಿ ಸದಸ್ಯರು ರಾಹುಲ್‌ ಗಾಂಧಿಯವರ ಹೇಳಿಕೆಗೆ ವಿರುದ್ಧವಾಗಿ ‘ರಾಹುಲ್ ಗಾಂಧಿ ಮಾಫಿ ಮಾವು’ ಎಂಬ ಘೋಷಣೆಗಳನ್ನು ಕೂಗಿದರು.

“ಈ ಸದನದ ಸದಸ್ಯರಲ್ಲದ ವ್ಯಕ್ತಿಯ ಹೆಸರನ್ನು ನೀವು ತೆಗೆದುಕೊಳ್ಳಲು ಸಾಧ್ಯವಿಲ್ಲ. ಸದನವನ್ನು ತೊಂದರೆಗೊಳಿಸುವ ಹಕ್ಕು ಯಾರಿಗೂ ಇಲ್ಲ” ಎಂದು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಹೇಳಿದರು ಮತ್ತು ಕೋಲಾಹಲದ ನಂತರ ಉಭಯ ಸದನಗಳನ್ನು ಮಧ್ಯಾಹ್ನ 12 ರವರೆಗೆ ಮುಂದೂಡಲಾಯಿತು. ಮೂರು ಬಾರಿ ಸದನವನ್ನು ಇದೇ ವಿಷಯಕ್ಕಾಗಿ ಮುಂದೂಡಬೇಕಾಗಿದೆ.

“ನರೇಂದ್ರ ಮೋದಿ ಅವರು‘ ಮೇಕ್ ಇನ್ ಇಂಡಿಯಾ ’ಎಂದು ಹೇಳಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ನೀವು ಎಲ್ಲಿ ನೋಡಿದರೂ ಅದು ‘ರೇಪ್ ಇನ್ ಇಂಡಿಯಾ’ ಆಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕರೊಬ್ಬರು ಮಹಿಳೆಯ ಮೇಲೆ ಅತ್ಯಾಚಾರವೆಸಗಿದರು, ನಂತರ ಅವರು ಅಪಘಾತಕ್ಕೀಡಾದರು. ಆದರೆ ನರೇಂದ್ರ ಮೋದಿ ಅವರು ಈ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ” ಎಂದು ಜಾರ್ಖಂಡ್‌ನ ಗೊಡ್ಡಾದಲ್ಲಿ ಗುರುವಾರ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಮಾತನಾಡುತ್ತಾ ರಾಹುಲ್‌ ಗಾಂಧಿ ಹೇಳಿದ್ದರು.

ಸ್ಮೃತಿ ಇರಾನಿಯವರ ಪ್ರತಿಭಟನೆಗೆ ಡಿಎಂಕೆ ಸಂಸದೆ ಕನಿಮೋಳಿ ತಿರುಗೇಟು ನೀಡಿದ್ದಾರೆ. ನಾವು ಗೌರವಿಸುವ ಪ್ರಧಾನಿ ಮೋದಿಯವರು ‘ಮೇಕ್ ಇನ್ ಇಂಡಿಯಾ’ ಎಂದು ಹೇಳಿದ್ದರು. ಆದರೆ ದೇಶದಲ್ಲಿ ಇಂದು ಏನು ನಡೆಯುತ್ತಿದೆ? ಅದನ್ನೇ ರಾಹುಲ್ ಗಾಂಧಿ ಸಹ ಹೇಳಲು ಉದ್ದೇಶಿಸಿದ್ದರು. ದುರದೃಷ್ಟವಶಾತ್ ಮೇಕ್ ಇನ್ ಇಂಡಿಯಾ ನಡೆಯುತ್ತಿಲ್ಲ ಬದಲಿಗೆ ದೇಶದ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಇದು ಒಂದು ಕಳವಳ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights