ರೈತರಿಗೆ ಸಂಕಷ್ಟ ತರುವ ಎಪಿಎಂಸಿ ತಿದ್ದುಪಡಿ ನಡೆ ಸರಕಾರ ಕೈಬಿಡದಿದ್ದಲ್ಲಿ ಉಗ್ರ ಹೋರಾಟ – ಹೆಚ್ಡಿಕೆ

ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ರೈತರಿಗೆ ಸಂಕಷ್ಟ ತರುವ ನಡೆಯನ್ನು ಸರಕಾರ ಕೈಬಿಡಬೇಕು ಇಲ್ಲವಾದರೆ ಹೋರಾಟವನ್ನು ಎದುರಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹೌದು… ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿ‌ ನಿರ್ಧಾರವಾಗುತ್ತಿದೆ.ರೈತರ ಬದುಕನ್ನು ಅಭದ್ರಗೊಳಿಸುವ,  ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಈ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು.ಇದು ಕಡೇ ಎಚ್ಚರಿಕೆ. ಇಲ್ಲವಾದರೆ ಹೋರಾಟ ಎದುರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಅವರು,  ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಕುರಿತು ಇಂದು ಸಚಿವ ಸಂಪುಟದಲ್ಲಿನಿರ್ಧಾರವಾಗುತ್ತಿದೆ. ರೈತರ ಬದುಕನ್ನು ಅಭದ್ರಗೊಳಿಸುವ, ಬಹುರಾಷ್ಟ್ರೀಯ ಕಂಪನಿಗಳ ದಾಸ್ಯಕ್ಕೆ ಒಳಪಡಿಸುವ ಸುಗ್ರೀವಾಜ್ಞೆಗೆ ಸರ್ಕಾರ ಯಾವುದೇ ಕಾರಣಕ್ಕೂ ಮುಂದಾಗಬಾರದು. ಇದು ಕಡೇ ಎಚ್ಚರಿಕೆ. ಇಲ್ಲವಾದರೆ ಹೋರಾಟ ಎದುರಿಸಬೇಕು ಎಂದಿದ್ದಾರೆ.

ಬಹುರಾಷ್ಟ್ರೀಯ ಕಂಪನಿಗಳಿಗೆ ನಮ್ಮನ್ನು ಒಪ್ಪಿಸಿಕೊಳ್ಳುವುದು ಅಪಾಯಕಾರಿ. ಅಭದ್ರತೆಯ ವ್ಯವಸ್ಥೆಗೆ ಕೃಷಿ, ರೈತರನ್ನು ಒಳಪಡಿಸುವುದು ನಮ್ಮ ಬೆನ್ನೆಲುಬನ್ನೇ ಮುರಿದಂತೆ. ₹20 ಲಕ್ಷ ಕೋಟಿ ಪ್ಯಾಕೇಜ್ ವೇಳೆಲೋಕಲೈಸೇಶನ್ಬಗ್ಗೆ ಮೋದಿ ಮಾತನಾಡಿದ್ದರು. ಆದರೆ ಬಹುರಾಷ್ಟ್ರೀಯ ಕಂಪನಿಗಳಿಗೆ ರೈತರನ್ನು ಒಪ್ಪಿಸುವುದು ಯಾವಲೋಕಲೈಸೇಶನ್’? ಎಂದು ಪ್ರಶ್ನಿಸಿದ್ದಾರೆ.

ರೈತ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಒಂದು ವೇಳೆ ವಂಚನೆಗೊಳಗಾದರೆ ಎಪಿಎಂಸಿ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳಲು ಅವಕಾಶವಿದೆ. ಆದರೆ ಬಹುರಾಷ್ಟ್ರೀಯ ಕಂಪನಿಗಳು ಮಾಡುವ ವಂಚನೆಗಳ ವಿರುದ್ಧ ನಮ್ಮ ರೈತರು ಹೋರಾಡಬಲ್ಲರೇ? ಅವರ ಕೂಟ ವ್ಯವಸ್ಥೆಯ ಎದುರು ಸೆಣಸಬಲ್ಲರೇ? ಕೃಷಿ ವ್ಯವಸ್ಥೆಗೆ ಕಾಯಕಲ್ಪ ತರಬೇಕು. ಆದರೆ ದಾಸ್ಯಕ್ಕೊಳಪಡಿಸಬಾರದು ಎಂದು ಎಚ್ ಡಿ ಕುಮಾರಸ್ವಾಮಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights