ಲಡಾಖ್ ಘರ್ಷಣೆ: ಭಾರತದ 20 ಸೈನಿಕರು ಹಾಗೂ ಚೀನಾದ 43 ಸೈನಿಕರ ಹತ್ಯೆ!

ಭಾರತದ ಗಡಿ ಪ್ರದೇಶ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಭಾರತದ 20 ಯೋಧರ ಹತ್ಯೆಯಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.

ಸೋಮವಾರ ತಡರಾತ್ರಿ ಲಡಾಖ್ ನಲ್ಲಿ ನಡೆದ ಸಂಘರ್ಷದಲ್ಲಿ ಮೂವರು ಯೋಧರು ಹುತಾತ್ಮರಾಗಿ, 17 ಸೈನಿಕರು ಗಂಭೀರ ಗಾಯಗೊಂಡಿದ್ದರು. ಆದರೆ, ಎತ್ತರದ ಪ್ರದೇಶ ಹಾಗೂ ಶೂನ್ಯಕ್ಕಿಂತಲೂ ಕಡಿಮೆ ಉಷ್ಣಾಂಶವಿರುವ ಪ್ರದೇಶವಿದ್ದರಿಂದ ಗಾಯಗೊಂಡ ಸೈನಿಕರು ಸಾವನ್ನಪ್ಪಿದ್ದಾರೆ. ಈ ಮೂಲಕ 20 ಭಾರತೀಯ ಯೋಧರು ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

ಭಾರತೀಯ ಸೈನಿಕರು ಪ್ರತಿದಾಳಿ ನಡೆಸಿದ್ದು ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

Death of 3 soldiers in Ladhak: China requests India not to take ...

ಇದಕ್ಕು ಮುನ್ನ ಉಭಯ ದೇಶದ ಯೋಧರ ನಡುವಿನ ಸಂಘರ್ಷದಲ್ಲಿ ಭಾರತೀಯ ಸೇನೆಯ ಕರ್ನಲ್ ಮತ್ತು ಇಬ್ಬರು ಯೋಧರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿತ್ತು. ಇದೇ ವೇಳೆ ಚೀನಾದ ಕಡೆಯೂ ಸಾವು ನೋವು ಸಂಭವಿಸಿದ್ದು, 100ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆಯ ಹಿರಿಯ ವರದಿಗಾರ್ತಿ ವಾಂಗ್ ವೆನ್ವೆನ್ ಎಂಬುವರು ಟ್ವೀಟ್ ಮಾಡಿ ಕಳೆದ ರಾತ್ರಿ ಭಾರತ ಮತ್ತು ಚೀನಾ ಯೋಧರ ನಡುವಿನ ಸಂಘರ್ಷದಲ್ಲಿ ಐವರು ಚೀನಾದ ಸೈನಿಕರು ಹತ್ಯೆಯಾಗಿದ್ದು 11 ಜನ ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights