ಲಾಕ್‌ಡೌನ್‌ ಮತ್ತಷ್ಟು ಬಿಗಿ; ಉಲ್ಲಂಘಿಸಿದವರ ಮೇಲೆ ಕಠಿಣ ಕ್ರಮ

ದೇಶಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿದ್ದರೂ ರಾಜ್ಯದಲ್ಲಿ ಜನ ಹಾಗೂ ವಾಹನಗಳ ಸಂಚಾರ ನಿಯಂತ್ರಣಕ್ಕೆ ಬರುತ್ತಿಲ್ಲ. ಏಪ್ರಿಲ್ 14ಕ್ಕೆ ಲಾಕ್‌ಡೌನ್‌ ಕೊನೆಯಾಗಬೇಕು ಎಂದರೆ ಎಲ್ಲರೂ ಮನೆಯಲ್ಲಿಯೇ ಇರಿ, ಹೊರಗೆ ಬರಬೇಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ. ನಿನ್ನೆ ಯಡಿಯೂರಪ್ಪನವರೂ ಅದರ ಸೂಚನೆಯನ್ನು ನೀಡಿದ್ದಾರೆ. ಈ ಎಲ್ಲಾ ಕಾರಣಗಳಿಂದ ಲಾಕ್‌ಡೌನ್‌ ಮತ್ತಷ್ಟು ಕಠಿಣಗೊಳಿಸಲು ಪೊಲೀಸರಿಗೆ ಪೂರ್ಣ ಅಧಿಕಾರ ನೀಡಲಾಗಿದೆ. ಹೀಗಾಗಿ ಏ.14ರವರೆಗೆ ಲಾಕ್‌ಡೌನ್‌ ಇನ್ನಷ್ಟು ಬಿಗಿಗೊಳಿಸಲಾಗಿದೆ.

ಲಾಕ್‌ಡೌನ್‌ ಇದ್ದರೂ ಜನ ಅನಗತ್ಯವಾಗಿ ಓಡಾಡುವುದು ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಇದಕ್ಕಾಗಿ ಲಾಕ್‌ಡೌನ್‌ನ್ನು ಇನ್ನಷ್ಟು ಬಿಗಿಗೊಳಿಸಲು ನೇರವಾಗಿ ಅಖಾಡಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಅಖಾಡಕ್ಕೆ ಇಳಿದಿದ್ದು, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ಫುಲ್‌ ಪವರ್‌ ನೀಡಿ ಆದೇಶ ಹೊರಡಿಸಿದ್ದು, ಲಾಕ್‌ಡೌನ್‌ ಉಲ್ಲಂಘಿಸುವವರು ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.

ಲಾಕ್‌ಡೌನ್‌ ವೇಳೆ ನಿಯಮ ಉಲ್ಲಂಘಿಘಿಸುವ ವ್ಯಕ್ತಿಗಳ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಪ್ರಕರಣ ದಾಖಲಿಸಿಕೊಳ್ಳಲು ಠಾಣಾಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ಉಪಾಧ್ಯಕ್ಷರಾಗಿರುವ ಕಂದಾಯ ಸಚಿವ ಆರ್‌.ಅಶೋಕ್‌ ಅವರು ಈ ಸಂಬಂಧ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ಸೂಚನೆ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights