ಲಾಕ್‌ಡೌನ್ ವಿಸ್ತರಿಸಬೇಕೆ? ಮುಖ್ಯಮಂತ್ರಿಗಳ ಅಭಿಪ್ರಾಯ ಕೇಳಿದ ಅಮಿತ್ ಶಾ

ಮೇ 31ರ ನಂತರ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ ಮಾಡಬೇಕೆ ಅಥವಾ ಬೇಡವೇ? ಲಾಕ್‌ಡೌನ್‌ ವಿಸ್ತರಿಸುವುದಾದರೆ ಹೊಸ ರೂಪದಲ್ಲಿ ಹೇಗೆ ಮಾಡಬಹುದು ಎಂಬ ಬಗ್ಗೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕೇಳಿದ್ದಾರೆ.

ದೂರವಾಣಿ ಮೂಲಕ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಅಮಿತ್ ಶಾ ಮಾತನಾಡಿದ್ದಾರೆ  ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ದೇಶಾದ್ಯಂತ ನಾಲ್ಕನೇ ಹಂತದ ಲಾಕ್ ಡೌನ್ ಮುಗಿಯುವುದಕ್ಕೆ ಇನ್ನು ಮೂರು ದಿನಗಳು ಬಾಕಿಯಿದ್ದು ಈ ಸಂದರ್ಭದಲ್ಲಿ ಆಯಾ ರಾಜ್ಯಗಳಲ್ಲಿನ ಪರಿಸ್ಥಿತಿ ನೋಡಿಕೊಂಡು ಅಲ್ಲಿನ ಸರ್ಕಾರಗಳು ತೆಗೆದುಕೊಳ್ಳುವ ತೀರ್ಮಾನಗಳು ಮುಖ್ಯವಾಗಿರುತ್ತದೆ ಎಂದು ಹೇಳಲಾಗಿದೆ.

ಅದಕ್ಕಾಗಿಯೇ ರಾಜ್ಯದ ಮುಖ್ಯಮಂತ್ರಿಗಳ ಅಭಿಪ್ರಯಾವನ್ನು ಕೇಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಕೊರೊನಾ ವೈರಸ್‌ ಮೂರನೇ ಹಂತದ ಲಾಕ್‌ಡನ್‌ನಲ್ಲಿ ಕೆಲವು ಸಡಿಲಿಕೆ ಮಾಡಿದ ನಂತರ ವ್ಯಾಪಕವಾಗಿ ಹರಡುತ್ತಿದ್ದು, ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಪ್ರತಿದಿನ ಸರಾಸರಿ 6,000 ಹೊಸ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಮುಂದುವರೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights