ಲಾಕ್‍ಡೌನ್ ನಂತರ ಕೃಷಿ ಸಾಲ ಮುಟ್ಟಿಸಲು ಸಾಧ್ಯವಿಲ್ಲ : ರೈತರ ಸಾಲಮನ್ನ ಮಾಡಿ – ಸಿದ್ಧರಾಮಯ್ಯ

ಇಂದು ಲಾಕ್ ಡೌನ್ ಮೇ 3ರವರೆಗೂ ಮುಂದುವರೆಸುವುದಾಗಿ ಹೇಳಿದ ಪ್ರಧಾನಿ ಮೋದಿ ಅವರ ಭಾಷಣದಲ್ಲಿ ಇನ್ನೂ ಕೆಲ ವಿಚಾರಗಳು ಒಳಗೊಳ್ಳಬೇಕಾಗಿತ್ತು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ದೇಶಾದ್ಯಂತ ಲಾಕ್ ಡೌನ್ ನಿಂದಾಗಿ ಜನ ಸಂಕಷ್ಟದಲ್ಲಿದ್ದಾರೆ. ರೈತರು, ಕೂಲಿ ಕಾರ್ಮಿಕರ ಆರ್ಥೀಕ ಸ್ಥಿತಿ ಗಂಭೀರವಾಗಿದೆ. ಇವರಿಗೆ ಕೇಂದ್ರ ಸರ್ಕಾರದಿಂದ ಸಹಾಯ ಮಾಡುವ ನಿರೀಕ್ಷೆ ಇತ್ತು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಪ್ರಸ್ತಾಪ ಮಾಡುತ್ತಾರೆ ಎನ್ನುವ ಭರವಸೆ ಹೊಂದಿದ್ದೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಯಾವುದೇ ಮಾತನಾಡಿಲ್ಲ ಎಂದಿದ್ದಾರೆ.

ಹೌದು… ದೇಶವನ್ನುದ್ದೇಶಿಸಿ ಮೋದಿ ಮಾತನಾಡಿದ ನಂತರ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯಎರಡನೇ ಬಾರಿಗೆ ಮೇ 3ರವರೆಗೆ ಲಾಕ್ ಡೌನ್ ವಿಸ್ತರಿಸಿರುವುದಕ್ಕೆ ನಮ್ಮ ವಿರೋಧ ಇಲ್ಲ. ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಮದ್ದು.‌ ಇದರಲ್ಲಿ ಎರಡು ಮಾತಿಲ್ಲ ಎಂದಿದ್ದಾರೆ. ಆದರೆ ರೈತರು, ದಿನ ನಿತ್ಯ ಕೂಲಿ ಮಾಡುವವರಿಗೆ ಮೋದಿ ತಮ್ಮ ಭಾಷಣದಲ್ಲಿ ಏನನ್ನು ಘೋಷಣೆ ಮಾಡಿಲ್ಲ. ಕೃಷಿ ಸಾಲದ ಕಂತನ್ನು ಮೂರು ತಿಂಗಳ ನಂತರ ಬಡ್ಡಿ‌ ಸಮೇತ ಮಾಡಿ ಎಂದರೆ ಯಾರಿಗೆ ಲಾಭವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಲಾಕ್ ಡೌನ್ ಘೋಷಣೆ ಮಾಡಿ ಎಲ್ಲ ವಹಿವಾಟು ಸ್ಥಗಿತಗೊಳಿಸಿದ ಮೇಲೆ ಸಾಲ ತೀರಿಸಲು ಹೇಗೆ ಸಾಧ್ಯ. ಲಾಕ್ ಡೌನ್ ಅವಧಿ ಮುಗಿದ ಮೇಲೆ ಬಡ್ಡಿ ಸಮೇತ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕೃಷಿ ಸಾಲವನ್ನೇ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights