ವಿಜಯಪುರಕ್ಕೂ ಕಾಲಿಟ್ಟ ಕೊರೊನಾ : ರಾಜ್ಯದಲ್ಲಿ ಹೊಸದಾಗಿ 11 ಮಂದಿಗೆ ಸೋಂಕು ದೃಢ!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಇಂದು ಹೊಸದಾಗಿ 11 ಸೋಂತರು ದೃಢಪಟ್ಟಿದ್ದಾರೆ. ಇದು ರಾಜ್ಯದ ಜನತೆಯನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ.

ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೋವಿಡ್ -19 ಸೋಂಕು ತಗುಲಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಗುಮ್ಮಟ ನಗರಿಯ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಕಲಬುರಗಿಯ ಸತ್ತ ವೃದ್ಧನಿಂದ ಇಬ್ಬರಿಗೆ, ಮೈಸೂರಿನ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಬೆಂಗಳೂರಿನ ಇಬ್ಬರು ಮತ್ತು ವಿಜಯಪುರದ 60 ವರ್ಷದ ಮಹಿಳೆಗೆ ತೀವ್ರ ಉಸಿರಾಟದ ತೊಂದರೆಯಿಂದ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಬೆಳಗಾವಿಯಲ್ಲಿ ಜಮಾತ್ ನಿಂದ ಬಂದ ತಬ್ಲಿಘಿಯಿಂದ ಸೋಂಕು ತಗುಲಿದ್ದು, ಕುಂದಾನಗರಿಗೆ ಜಮಾತ್ ಕಂಟಕ ಎದುರಾಗುತ್ತಾ ಅನ್ನೋ ಆತಂಕ ಸೃಷ್ಟಿಯಾಗಿದೆ.

ಒಟ್ಟು 226 ಸೋಂಕಿತರಲ್ಲಿ ಈಗಾಗಲೇ 47 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯಕ್ಕೆ 173 ಜನರು ಕೊರೋನಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 6 ಜನರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತ ಜಿಲ್ಲೆಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಬೆಂಗಳೂರೊಂದರಲ್ಲೇ 76 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 2ನೇ ಸ್ಥಾನದಲ್ಲಿರುವ ಮೈಸೂರಿನಲ್ಲಿ 48 ಕೊರೋನಾ ಸೋಂಕಿತರಿದ್ದಾರೆ. ಮೂರನೇ ಸ್ಥಾನದಲ್ಲಿ ಬೆಳಗಾವಿಯಿದ್ದು, ಈ ಜಿಲ್ಲೆಯಲ್ಲಿ 14 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ಒಟ್ಟಿನಲ್ಲಿ ಲಾಕ್ ಡೌನ್ ನಡುವೆಯೂ ಕೊರೊನಾ ಸೋಂಕು ಹರಡುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇದೆಕ್ಕೆಲ್ಲಾ ಕೊನೆ ಯಾವಾಗಾ? ಅನ್ನೋ ಭಯದಿಂದಲೇ ಜನ ಜೀವನ ದೂಡುತ್ತಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights