ವಿಜಯಪುರದಲ್ಲಿ ಕೊರೊನಾಗೆ 3ನೇ ಬಲಿ : ರಾಜ್ಯದಲ್ಲಿ ಸಾವಿನ ಸಂಖ್ಯೆ 27ಕ್ಕೇರಿಕೆ!
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕೊರೊನಾ ವೈರಸ್ ಗೆ ವಿಜಯಪುರದಲ್ಲಿ ಮತ್ತೊಂದು ಬಲಿಯಾಗಿದೆ. ಈ ಮೂಲಕ ವಿಜಯಪುರದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.
ಇಂದು ವಿಜಯಪುರದಲ್ಲಿ 65 ವರ್ಷದ 640 ಸೋಂಕಿತ ಮಹಿಳೆ ಬಲಿಯಾಗಿದ್ದಾರೆ. ಮಹಿಳೆಗೆ ಕೊರೊನಾ ವೈರಸ್ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಈ ಮೂಲಕ ವಿಜಯಪುರದಲ್ಲಿ ಕೊರೊನಾ ಸೋಂಕಿಗೆ 3 ನೇ ಬಲಿಯಾಗಿದೆ.
ಇದೀಗ ರಾಜ್ಯದಲ್ಲಿ ಒಟ್ಟು ಸಕ್ರಿಯ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿರುವುದು ತುಸು ನೆಮ್ಮದಿ ತಂದಿದೆ. 651 ಮಂದಿ ಸೋಂಕಿತರ ಪೈಕಿ 27 ಮಂದಿ ಮೃತಪಟ್ಟಿದ್ದು, 231 ಮಂದಿ ಗುಣಮುಖರಾಗಿದ್ದಾರೆ. ುಳಿದ 302 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾವಣಗೆರೆಯಲ್ಲಿ ಮತ್ತೊಬ್ಬರು 48 ವರ್ಷದ ಕೊರೋನಾ ವೈರಸ್ ಸೋಂಕಿತ ಮಹಿಳೆ ಮೃತಪಟ್ಟಿದ್ದು, ಇವರಿಗೆ ಇತ್ತೀಚೆಗೆ ಸೋಂಕಿಗೊಳಗಾಗಿದ್ದ ನರ್ಸ್ ದ್ವಿತೀಯ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ಪರೀಕ್ಷೆಯಿಂದ ದೃಢಪಟ್ಟಿದೆ. ಮತ್ತೊಂದು ಪ್ರಕರಣದಲ್ಲಿ ಕಲಬುರಗಿಯ 56 ವರ್ಷದ ಸೋಂಕಿತ ಪುರುಷ ಸಾವಿಗೀಡಾದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

