ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಮುಂದೆ ಹೋಗಿದ್ದಕ್ಕೆ ಕೆಎಸ್ ಆರ್ ಟಿಸಿ ಬಸ್ ಚಾಲಕನನ್ನು ಥಳಿಸಿದ ಗ್ರಾಮಸ್ಥರು…!
ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಮುಂದೆ ಹೋಗಿದ್ದಕ್ಕೆ ಕೆಎಸ್ ಆರ್ ಟಿಸಿ ಬಸ್ ಚಾಲಕನನ್ನು ಗ್ರಾಮಸ್ಥರು ಥಳಿಸಿದ ಘಟನೆ ಹುಬ್ಬಳ್ಳಿಯ ಚಬ್ಬಿ ಗ್ರಾಮದಲ್ಲಿ ನಡೆದಿದೆ.
ಚಬ್ಬಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸನ್ನು ನಿಲ್ದಾಣದಲ್ಲಿ ವಿದ್ಯಾರ್ಥಿಗಳಿದ್ದರೂ ನಿಲ್ಲಿಸದೆ ಮುಂದೆ ಸಾಗಿದ್ದ ಚಾಲಕ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಮಧ್ಯ ಗ್ರಾಮಸ್ಥರು ಬಸ್ ಅಡ್ಡಗಟ್ಟಿ ನಿಲ್ಲಿಸಿ ಡ್ರೈವರ್ಗೆ ಥಳಿಸಿದ್ದಾರೆ.
ನಿಲ್ದಾಣದಲ್ಲಿ ವಿದ್ಯಾರ್ಥಿಗಳಿದ್ದರೂ ಬಸ್ ನಿಲ್ಲಿಸದೆ ಮುಂದೆ ಸಾಗಿದ್ದ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಗ್ರಾಮಸ್ಥರು. ಚಾಲಕನಿಗೆ ಥಳಿಸಿದ ದೃಶ್ಯ ಸದ್ಯ ವೈರಲ್ ಆಗಿದೆ.

