ವಿಶ್ವದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ : 2 ಲಕ್ಷ ಮೀರಿದ ಸೋಂಕಿತರ ಸಂಖ್ಯೆ

ಜಗತ್ತಿನಲ್ಲಿ  ಕೋವಿಡ್ ವೈರಸ್​  ದಾಳಿ ದಿನದಿಂದ ದಿನಕ್ಕೆಕಾಡಗಿಚ್ಚಿನಂತೆ ಹರಡುತ್ತಿದ್ದು, ಸದ್ಯಕ್ಕೆ ನಿಲ್ಲುವ ಲಕ್ಷಣ ಗೋಚರವಾಗುತ್ತಿಲ್ಲ. ವಿಶ್ವದಲ್ಲಿ ಈ ವೈರಸ್​ನಿಂದ ಮೃತಪಟ್ಟವರ ಸಂಖ್ಯೆ ಎರಡು ಲಕ್ಷ ದಾಟಿದರೆ, ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ಸಮೀಪಿಸಿದೆ.

29.19 ಲಕ್ಷ ಜನರಿಗೆ ಕೊರೊನಾ ಸೋಂಕು ವಿಶ್ವದಾದ್ಯಂತ ಹರಡಿದೆ. ಈ ಮಹಾಮಾರಿ ವೈರಸ್​ನಿಂದ 2.3 ಲಕ್ಷ ಮಂದಿ ಅಸುನೀಗಿದ್ದಾರೆ. ಈ ವೈರಸ್​ನಿಂದ ಗುಣಮುಖರಾದವರ ಸಂಖ್ಯೆ 8.35  ಲಕ್ಷ ಮಂದಿ.

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಕೊರೋನಾ ಸೋಂಕು ಮಿತಿಮೀರಿ ಹಬ್ಬುತ್ತಿದೆ. ಪ್ರತಿನಿತ್ಯ ಅಮೆರಿಕದಲ್ಲಿ 1.5-2 ಸಾವಿರ ಮಂದಿ ಮೃತಪಡುತ್ತಿದ್ದಾರೆ. ಹೀಗಾಗಿ ಅಮೆರಿಕದಲ್ಲಿ ಸಾವಿನ ಸಂಖ್ಯೆ 54 ಸಾವಿರಕ್ಕೆ ಏರಿಕೆ ಆಗಿದೆ. 9.6 ಲಕ್ಷ ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ.ಸ್ಪೇನ್​ನಲ್ಲಿ 2.3 ಲಕ್ಷದ ಗಡಿ ದಾಟಿದೆ. 22,902 ಸಾವಿರ ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ 1.95 ಲಕ್ಷ ಜನರಿಗೆ ಸೋಂಕು ಅಂಟಿದ್ದು, ಸಾವಿನ ಸಂಖ್ಯೆ 26 ಸಾವಿರದ ಗಡಿ ತಲುಪಿದೆ. ಈ ಮೊದಲ ವಾರಗಳಿಗೆ ಹೋಲಿಸಿದರೆ ಇಟಲಿಯಲ್ಲಿ ಕೊರೋನಾ ಕೊಂಚ ನಿಯಂತ್ರಣಕ್ಕೆ ಬಂದಿದೆ ಎನ್ನಬಹುದು.

ಫ್ರಾನ್ಸ್​, ಜರ್ಮನಿ, ಇಂಗ್ಲೆಂಡ್​ನಲ್ಲೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ. ಫ್ರಾನ್ಸ್​ನಲ್ಲಿ 1.65 ಲಕ್ಷ ಮಂದಿಗೆ ಕೊರೋನಾ ದೃಢಪಟ್ಟಿದೆ. 22,616 ಸಾವಿರ ಮಂದಿ ಮೃತಪಟ್ಟಿದ್ದಾರೆ. ಜರ್ಮನಿಯಲ್ಲಿ 1.56 ಲಕ್ಷ ಜನರಿಗೆ ಕೊರೋನಾ ಸೋಂಕಿದೆ. 5,877 ಜನರು ಮೃತಪಟ್ಟಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights