ವಿಶ್ವದ ದೊಡ್ಡಣ್ಣನಿಗೆ ಶಾಕ್ ಕೊಟ್ಟ ಕೊರೊನಾ : ಒಂದೇ ದಿನಕ್ಕೆ 10 ಸಾವಿರ ಶೋಂಕಿತರು ಪತ್ತೆ!

ವಿಶ್ವದ ದೊಡ್ಡಣ್ಣನಿಗೆ ಕೊರೊನಾ ದೊಡ್ಡ ಶಾಕ್ ಕೊಟ್ಟಿದೆ. ಅಮೆರಿಕಾ ಕೊರೊನಾ  ಸೋಂಕಿಗೆ ನಲುಗಿ ಹೋಗಿದೆ. ಗುರುವಾರ ಒಂದೇ ದಿನಕ್ಕೇ ಅಮೆರಿಕಾದಲ್ಲಿ 10 ಸಾವಿರ ಸೋಂಕಿತರು ಪತ್ತೆಯಾಗಿದ್ದು ಇಡೀ ದೇಶದ ಜನತೆಯನ್ನೇ ಬೆಚ್ಚಿ ಬೀಳಿಸಿದೆ.

ಹೌದು…  ವಿಶ್ವದ ಮುಂದುವರಿದ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿದ್ದರೂ ಕೊರೋನಾ ವೈರಸ್​ ತಡೆಯಲು ಮಾತ್ರ ಅಮೆರಿಕದ ಬಳಿ ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಅಮೆರಿಕಾದಲ್ಲಿ ಹತ್ತು ಸಾವರ ಜನರಿಗೆ ಒಂದೇ ದಿನಕ್ಕೆ ಸೋಂಕು ತಗುಲಿದೆ.

ಮತ್ತೊಂದು ಶಾಕಿಂಗ್ ನ್ಯೂಸ್ ಎಂದರೆ ದೇಶವೊಂದರಲ್ಲಿ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಕೊರೊನಾ ವೈರಸ್ ಪ್ರಕರಣ ದಾಖಲಾಗಿದ್ದು ವಿಶ್ವದಲ್ಲಿ ಇದೇ ಮೊದಲು ಎನ್ನಲಾಗಿದೆ. ಈ ಮೂಲಕ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 85,327ಕ್ಕೆ ಏರಿಕೆ ಆಗಿದೆ. ನಿನ್ನೆ ಒಂದೇ ದಿನ ಅಮೆರಿಕದಲ್ಲಿ 220 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ1,293ಕ್ಕೆ ಏರಿಕೆ ಆಗಿದೆ.

ಅಮೆರಿಕಾ ಈ ವಿಚಾರದಲ್ಲಿ ಯಾವುದೇ ದೇಶವನ್ನ ಹಿಂದಿಕ್ಕಿಲ್ಲ. ಇದು ಜನತೆಯಲ್ಲಿ ತೀರ್ವ ಆತಂಕವನ್ನು ಸೃಷ್ಟಿ ಮಾಡಿದೆ. ಈ ಪ್ರಮಾಣ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಇಟಲಿಯಲ್ಲಿ ಸದ್ಯದ ಮಟ್ಟಿಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬರು ಲಕ್ಷಣ ಗೋಚರವಾಗುತ್ತಿಲ್ಲ. ಬುಧವಾರ ಒಂದೇ ದಿನ ಇಟಲಿಯಲ್ಲಿ 712 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 8,215ಕ್ಕೆ ಏರಿಕೆ ಆಗಿದೆ. ಒಟ್ಟು 80 ಸಾವಿರ ಕೊರೋನಾ ಸೋಂಕಿತರಿದ್ದಾರೆ. ಸಾವಿನ ಸಂಖ್ಯೆಯಲ್ಲಿ ಸ್ಪೇನ್​ ಚೀನಾವನ್ನು ಹಿಂದಿಕ್ಕಿದೆ. ಸ್ಪೇನ್​ನಲ್ಲಿ ಈವರೆಗೆ 4365 ಸಾವುಗಳು ಸಂಭವಿಸಿವೆ. ಇನ್ನು, ಕೊರೋನಾ ಪೀಡಿತರ ಸಂಖ್ಯೆ 57 ಸಾವಿರದ ಗಡಿ ದಾಟಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights