ವೈದ್ಯಕೀಯ ಶಿಕ್ಷಣ ಸಚಿವರ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು!

ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ಸೋಂಕು ದೃಢಪಟ್ಟಿದೆ.  ಸಚಿವ ಸುಧಾಕರ್‌ ಅವರ ಮೆನೆಯಲ್ಲಿರುವ ಸದಸ್ಯರಿಗೆ ಸೋಂಕು ಇರುವುದು ದೃಢಪಟ್ಟಿರುವುದಾಗಿ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸುಧಾಕರ್ ಅವರ ಮನೆ ಕೆಲಸದವರಿಗೆ ಸೋಂಕು ದೃಢಪಟ್ಟಿತ್ತು. ನಿನ್ನೆ ಬೆಳಗ್ಗೆ ಸುಧಾಕರ್ ಅವರ 82 ವರ್ಷ ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ತಂದೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇನ್ನು ಮನೆಯವರೆಲ್ಲರ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು ಪತ್ನಿ ಮತ್ತು ಮಗಳಿಗೆ ಸೋಂಕು ದೃಢಪಟ್ಟಿದ್ದು, ನಾನು ಮತ್ತು ನನ್ನ ಇಬ್ಬರು ಗಂಡು ಮಕ್ಕಳ ವರದಿ ನೆಗೆಟಿವ್ ಬಂದಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

https://twitter.com/mla_sudhakar/status/1275241167811014656

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights