ಶನಿವಾರದ ರಜೆಗಾಗಿ ಊರಿಗೆ ತೆರಳಿದ್ದ ಪತ್ರಕರ್ತ ರೋಹಿತ್ ದುರ್ಘಟನೆಯಲ್ಲಿ ನಿಧನ…
ಶನಿವಾರದ ರಜೆಗಾಗಿ ಊರಿಗೆ ತೆರಳಿದ್ದ ಪತ್ರಕರ್ತ ರೋಹಿತ್ (36) ಆಕಸ್ಮಿಕವಾಗಿ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.
ರೋಹಿತ್ ಟೈಮ್ಸ್ ಆಫ್ ಇಂಡಿಯಾ ವರದಿಗಾರರಾಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಜೆ ಇದ್ದ ಕಾರಣಕ್ಕೆ ತಮ್ಮ ತಂದೆಯ ಊರಾದ ಸದರನಹಳ್ಳಿಗೆ ಬಂದಿದ್ದರು. ಸ್ನೇಹಿತರೊಂದಿಗೆ ತಮ್ಮ ತೋಟದ ಬಾವಿಯಲ್ಲಿ ಈಜಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ.
ಈ ವೇಳೆ ಬಾವಿಯ ಕಲ್ಲು ತಲೆಗೆ ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

