ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿದ ಊಟದಲ್ಲಿ ಹುಳುಗಳು ಪತ್ತೆ….!

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿದ ಊಟ ತಿಂದ ವಿದ್ಯಾರ್ಥಿಗಳು ಆಸ್ಪತ್ರೆ ಸೇರಿದ ಘಟನೆ ಹೆಚ್.ಡಿ ಕೋಟೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ಪಟ್ಟಣದ ಆದರ್ಶ ಶಾಲೆಯಲ್ಲಿ ಇಂದು ಮಧ್ಯಾಹ್ನ ಊಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥರಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಾಲ್ಲೂಕು ಕೇಂದ್ರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ವಿದ್ಯಾರ್ಥಿಗಳಿಗೆ ವೈದ್ಯರಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ಹೆ.ಡಿ. ಕೋಟೆ ಪಟ್ಟಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆದರ್ಶ ಶಾಲೆಯಲ್ಲಿ ಇಂದು ಮದ್ಯಾಹ್ನ 6ನೇ ತರಗತಿ ವಿದ್ಯಾರ್ಥಿಗಳು ಊಟ ಸೇವಿಸಿದ್ದಾರೆ. ಈ ವೇಳೆ ಊಟದಲ್ಲಿ ಹುಳು ಕಂಡೊಡನೆ ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಶಾಲಾ ಸಿಬ್ಬಂಧಿಗಳಿಂದ ಇತರ ವಿದ್ಯಾರ್ಥಿಗಳಿಗೆ ನೀಡಬೇಕಾಗಿದ್ದ ಊಟ ಸ್ಥಗಿತಗೊಂಡಿದೆ.  ಸುಜಾತ ಮತ್ತು ಅಬ್ರಹಾರ್ ಎಂಬ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡಿದ್ದು  ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights