ಶಾಹಿನ್‌ಬಾಗ್‌ ಪ್ರತಿಭಟನಾ ಸ್ಥಳದ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ

ದೆಹಲಿಯ ಶಾಹೀನ್ ಬಾಗ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸ್ಥಳದ ಮೇಲೆ ದುಶ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದಿದ್ದಾರೆ. ಪ್ರತಿಭಟನಾ ಸ್ಥಳದಿಂದ ಐದು ಕಿ.ಮೀ ದೂರದಲ್ಲಿರುವ ಜಾಮಿಯಾ ವಿಶ್ವವಿದ್ಯಾಲಯದ ಬಳಿಯೂ ಬೈಕ್‌ನಲ್ಲಿ ದುಶ್ಕರ್ಮಿಯೊಬ್ಬಬೆಳಗ್ಗೆ ಕಚ್ಚಾ ಬಾಂಬ್ ಎಸೆಯುತ್ತಿರುವುದು ಕಂಡುಬಂದಿದೆ.

“ಶಾಹೀನ್ ಬಾಗ್ ಪ್ರತಿಭಟನಾಕಾರರಿಂದ ಸ್ವಲ್ಪ ದೂರದಲ್ಲಿ ರಸ್ತೆಗೆ ಅಡ್ಡಲಾಗಿ ಹಾಕಲಾಗಿರುವ ಬ್ಯಾರಿಕೇಡ್‌ಗಳ ಮೇಲೆ ಬೆಳಗ್ಗೆ 09:30ರ ಸಮಯದಲ್ಲಿ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಈ ಪ್ರಕರಣದಲ್ಲಿ ಬಳಸಿದ ಕೆಲವು ಬಾಟಲಿಗಳನ್ನು ನಾವು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಕುಮಾರ್ ಜ್ಞಾನೇಶ್ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಐಎಎನ್‌ಎಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

“ಬ್ಯಾರಿಕೇಡ್‌ಗಳ ಬಳಿ ಬೈಕ್‌ನಲ್ಲಿ ಬಂದಿದ್ದರೆಂದು ಗುರುತಿಸಿಲಾಗಿದೆ. ವಿವರವಾದ ತನಿಖೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಜ್ಞಾನೇಶ್ ಅವರು ಹೇಳಿದ್ದಾರೆ.

ಶಾಹಿನ್‌ ಬಾಗ್‌ ನಲ್ಲಿ ಸುಮಾರು90 ದಿನಗಳಿಗೂ ಹೆಚ್ಚು ದಿನಗ ಳಿಂದ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮುಸ್ಲೀಂ, ಆದಿವಾಸಿ, ದಲಿತ ಹಾಗೂ ಮಹಿಳಾ ವಿರೋಧಿ ಕಾಯ್ದೆಯಾಗಿರುವ ಸಿಎಎ, ಎನ್‌ಆರ್‌ಸಿ, ಎನ್‌ಪಿಎಗಳ ವಿರುದ್ಧ ನಡೆಯುತ್ತಿರುವ ಈ ಪ್ರತಿಭಟನೆ, ದೇಶಾದ್ಯಂತ ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿದೆ.

ಶನಿವಾರ, ಈ ಪ್ರತಿಭಟನಾಕಾರರೊಂದಿಗೆ ಪೊಲೀಸರು  ಸಭೆ ನಡೆಸಿದ್ದು, ಶಹೀನ್‌ಬಾಗ್‌ನಲ್ಲಿ ಪ್ರತಿಭಟನಾಕಾರರಿಗೆ ಮುಖವಾಡ ಮತ್ತು ಕೈ ಸ್ಯಾನಿಟೈಸರ್ ನೀಡಲಾಗುತ್ತಿದೆ. ಭಯಪಡುವ ಅಗತ್ಯವಿಲ್ಲ. ಪ್ರತಿಭಟನೆ ಮುಂದುವರಿಯಲಿದೆ ಎಂದು ಸಂಘಟಕರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.

“ನಾವು ಕೊರೊನಾ ವೈರಸ್‌ನಿಂದ ಸುರಕ್ಷಿತವಾಗಿರಲು ಪ್ರಧಾನಿ ಮೋದಿ ಬಯಸುವುದೇ ಆಗಿದ್ದಲ್ಲಿ, ಅವರು ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿಯನ್ನು ಹಿಂತೆಗೆದುಕೊಳ್ಳಬೇಕಿತ್ತು” ಎಂದು ಶಾಹೀನ್ ಬಾಗ್‌ನ ಪ್ರತಿಭಟನಾಕಾರರಲ್ಲಿ ಒಬ್ಬರಾದ ಸಲೀಮಾ ಅವರು ತಿಳಿಸಿದ್ದಾರೆ.

ದೆಹಲಿ ರಾಜ್ಯ ಸರ್ಕಾರ ದೆಹಲಿಯಲ್ಲಿ 50ಕ್ಕೂ ಹೆಚ್ಚು ಜನರು ಯಾವುದೇ ಸಭೆ-ಸಮಾರಂಭಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಆದೇಶಿಸಿದ್ದು, ಅದರಂತೆ ಪ್ರತಿಭಟನಾ ಸ್ಥಳದಲ್ಲಿ ಪ್ರತಿಭಟನಾಕಾರರ ಸಂಖ್ಯೆಯನ್ನು ಕಡಿಮೆ ಮಾಡಲಾಗಿದ್ದು, ಪ್ರತಿಭಟನೆ ಮುಂದುವರೆಯುತ್ತಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights