ಸಂವಿಧಾನ ವಿರೋಧಿ ಮೋದಿ ಸರ್ಕಾರ; ಪ್ರಜಾಪ್ರಭುತ್ವದ ಆತ್ಮಾವಲೋಕನಕ್ಕೆ ಸಂದರ್ಭ: ಸೋನಿಯಾ ಗಾಂಧಿ

ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿ ಆಡಳಿತ ನಡೆಸುತ್ತಿದೆ. ಇದರಿಂದಾಗಿ ಭಾರತೀಯ ಪ್ರಜಾಪ್ರಭುತ್ವ ಕುರಿತು ಆತ್ಮಾವಲೋಕನ ಸಂದರ್ಭ ಎದುರಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಸ್ವಾತಂತ್ರ್ಯದ ಅರ್ಥವೇನು ಎಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ದೇಶದ ಜನರಿಗೆ ಕರೆ ನೀಡಿರುವ ಅವರು, ಇಂದು ಪ್ರತಿಯೊಬ್ಬ ದೇಶವಾಸಿಯೂ ಸ್ವಾತಂತ್ರ್ಯ ಎಂದರೆ ಏನು ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ, ಪ್ರಶ್ನೆಗಳನ್ನು ಕೇಳುವುದಕ್ಕೆ, ಅಭಿಪ್ರಾಯಗಳನ್ನು ಮಂಡಿಸುವುದಕ್ಕೆ ಸ್ವಾತಂತ್ರ್ಯವಿದೆಯೇ ಎಂಬುದನ್ನು ಎಲ್ಲರೂ ಮನಗಾಣಬೇಕಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಸ್ವಾತಂತ್ರ್ಯ ಪಡೆದ ಕಳೆದ 74 ವರ್ಷಗಳಲ್ಲಿ ಪ್ರಜಾಪ್ರಭುತ್ವವನ್ನು ಬಲಪಡಿಸಲು, ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳನ್ನು ಕಾಪಾಡಲು ಶ್ರಮಿಸಿದ್ದೇವೆ. ಆದರೆ, ಇಂದು ಆಡಳಿತಾರೂಢ ಸರ್ಕಾರವು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ತತ್ವಗಳಿಗೆ ಮತ್ತು ಸ್ಥಾಪಿತ ಸಂಪ್ರದಾಯಗಳಿಗೆ ವಿರುದ್ಧವಾಗಿ ನಿಂತಿರುವುದನ್ನು ಕಾಣುತ್ತಿದ್ದೇವೆ. ಆದ್ದರಿಂದ ಭಾರತೀಯ ಪ್ರಜಾಪ್ರಭುತ್ವದ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಸಂದರ್ಭ ಇದಾಗಿದೆ ಎಂದು ದೇಶದ ಜನರಿಗೆ ನೀಡಿರುವ ಸಂದೇಶದಲ್ಲಿಅವರು ಹೇಳಿದ್ದಾರೆ.

ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾಂಗ್ರೆಸ್ ಪಕ್ಷವು ಭಾರತೀಯರ ಪ್ರಜಾಪ್ರಭುತ್ವದ ರುಜುವಾತುಗಳನ್ನು ರಕ್ಷಿಸುವ ಹಾಗೂ ಸಂವಿಧಾನದ ಮೌಲ್ಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿNEP ಕರ್ನಾಟಕದಲ್ಲೇ ಮೊದಲು ಜಾರಿ; ಶಿಕ್ಷಣ ಮಾರಾಟಕ್ಕೆ ಕರ್ನಾಟಕವೇ ಬಲಿಪಶು ಎಂದು ಕೆವಿಎಸ್‌ ವಿರೋಧ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights