ಸರಳವಾಗಿ ಮುಗಿದ ಕೇರಳ ಸಿಎಂ ಮಗಳ ಮದುವೆ; ಮಾದರಿಯಾದ ಪಿಣರಾಯಿ ವಿಜಯನ್

ಕೊರೊನಾ ಹಾಗೂ ಲಾಕ್‌ಡೌನ್‌ನಿಂದಾಗಿ ಎಲ್ಲವೂ ಸ್ಥಬ್ದವಾಗಿದ್ದು, ಈಗಷ್ಟೇ ಚಟುವಟಿಕೆಗಳು ಆರಂಭಗೊಳ್ಳುತ್ತಿವೆ. ಈ ನಡುವೆ ಇಂದು (ಸೋಮವಾರ) ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಗಳು ವೀಣಾ ಅವರ ವಿವಾಹ ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಅವರೊಂದಿನ ಸರಳವಾಗಿ ನಡದಿದೆ.

ಸಿಎಂ ಪಿಣರಾಯಿ ವಿಜಯನ್ ಅಧಿಕೃತ ನಿವಾಸದಲ್ಲಿ ಇಂದು ಬೆಳಗ್ಗೆ 10.30ಕ್ಕೆ ಇವರಿಬ್ಬರು ರಿಜಿಸ್ಟರ್ ಮದುವೆಯಾಗಿದ್ದಾರೆ. ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದಲ್ಲಿ ನಡೆದ ಮೊದಲ ಮದುವೆ ಇದಾಗಿದೆ.

ಎರಡೂ ಕುಟುಂಬಗಳ ಸದಸ್ಯರು ಮಾತ್ರ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೊರೋನಾ ಬಿಕ್ಕಟ್ಟು ಹೆಚ್ಚಾಗಿರುವುದರಿಂದ 50 ಜನರು ಮಾತ್ರ ಭಾಗವಹಿಸಿದ್ದರು ಎಂದು ವರದಿಯಾಗಿದೆ.

Image

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹಿರಿಯ ಮಗಳು ವೀಣಾ ಥಾಯಿಕ್ಕಂಡಿಯಾಲ್ ಡಿವೈಎಫ್​ಐ ರಾಷ್ಟ್ರಾಧ್ಯಕ್ಷ ಮೊಹಮ್ಮದ್‌ ರಿಯಾಜ್ ಅವರೊಂದಿಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.  ವೀಣಾ ಬೆಂಗಳೂರಿನ ಐಟಿ ಕಂಪನಿಯೊಂದರ ನಿರ್ದೇಶಕಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಲಾಕ್‌ಡೌನ್‌ ಸಂದರ್ಭದಲ್ಲಿಯೂ ತಮ್ಮ ರಾಜಕೀಯ ಕಾರ್ಯಕ್ರಮಗಳನ್ನು ಮಾಡಲು ಮುಂದಾಗಿರುವ ಕೆಲವು ರಾಜಕಾರಣಿಗಳಿಗೆ ಪಿಣರಾಯಿ ವಿಜಯನ್ ಈ ಮೂಲಕ ಮಾದರಿಯಾಗಿದ್ದಾರೆ. ಕರ್ನಾಟಕದ ಆರೋಗ್ಯ ಸಚಿವರು ಚಿತ್ರದುರ್ಗದ ಹಳ್ಳಿಯೊಂದರಲ್ಲಿ ನೂರಾರು ಜನರನ್ನು ಸೇರಿಸಿ, ಸೇಬಿಗೆ ಹಾರ ಹಾಕಿಸಿಕೊಂಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಪ್ರದಗ್ರಹಣ ಕಾರ್ಯಕ್ರಮಕ್ಕಾಗಿ ಸರ್ಕಾರದೊಂದಿಗೆ ತಿಕ್ಕಾಟ ನಡೆಸುತ್ತಿದ್ದಾರೆ. ನಿಖಿಲ್‌ ಕುಮಾರಸ್ವಾಮಿಯವರ ವಿವಾಹದಲ್ಲಿ ಹೆಚ್ಚು ವಾಹನಗಳಿಗೆ ಅನುಮತಿ ನೀಡಿದ್ದು, ಹೆಚ್ಚು ಜನರು ಭಾಗವಹಿಸಿದ್ದರು ಎಂಬ ಆರೋಪಗಳಿವೆ.

ಅಲ್ಲದೆ, ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು ಬಿಹಾರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನೂರಾರು ಕೋಟಿ ಖರ್ಚು ಮಾಡಿ ವರ್ಚುವಲ್ ರ್ಯಾಲಿ ಮಾಡಿದ್ದಾರೆ. ಇದೆಲ್ಲದರ ನಡುವೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಗಳ ಮದುವೆಯನ್ನು ಸರಳವಾಗಿ ನೆರವೇರಿಸಿದ್ದು, ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights