ಸಾರಿಗೆ ಚಾಲಕರ ಸಹಾಯಕ್ಕೆ ನಿಂತ ದೆಹಲಿ ಸಿಎಂ : ಪ್ರತಿಯೊಬ್ಬರಿಗೂ 5000 ರೂ. ಆರ್ಥಿಕ ನೆರವು
ಸಾರಿಗೆ ಚಾಲಕರಿಗೆ ಸಿಎಂ ಕೇಜ್ರಿವಾಲ್ ರಿಂದ 5 ಸಾವಿರ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದಾರೆ.
ಮೊನ್ನೆಯಷ್ಟೇ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಾಗ ಮಡಿದ ವೈದ್ಯರಿಗೆ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಸದ್ಯ ಲಾಕ್ ಡೌನ್ ನೀಮದ ಸಂಕಷ್ಟದಲ್ಲಿರವವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಹೌದು… ಆಟೋ, ಟ್ಯಾಕ್ಸಿ ಹಾಗೂ ಇ-ರಿಕ್ಷಾ ಸೇರಿದಂತೆ ಸಾರ್ವಜನಿಕ ವಾಹನದ ಚಾಲಕರ ನೆರವಿಗೆ ದೆಹಲಿ ಸರ್ಕಾರ ನಿಂತಿದ್ದು, ಪ್ರತಿಯೊಬ್ಬರಿಗೂ 5 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಸಿಎಂ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಸಾರಿಗೆ ಚಾಲಕರ ಬ್ಯಾಂಕ್ ಖಾತೆಗಳ ನಂಬರ್ ದೊರೆಯದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಹೇಗೆ ಕಾಋ್ಯ ರೂಪಕ್ಕೆ ತರಬೇಕೆಂದು ಸರ್ಕಾರ ಚಿಂತಿಸುತ್ತಿದೆ ಎಂದು ತಿಳಿಸಿದರು. ಜೊತೆಗೆ ದೆಹಲಿಯಲ್ಲಿ ಯಾರೊಬ್ಬರು ಹಸಿವಿನಿಂದ ಬಳಲುವುದಿಲ್ಲ ಎಂದು ಖಚಿತಪಡಿಸಿದ್ದಾರೆ.
ಮುಂದಿನ 7 ರಿಂದ 10 ದಿನಗಳಲ್ಲಿ ಸಾರ್ವಜನಿಕ ಸೇವಾ ಚಾಲಕರಿಗೆ ಆರ್ಥಿಕ ನೆರವನ್ನು ಖಂಡಿತವಾಗಿ ಒದಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ಸುಮಾರು 35 ಸಾವಿರಕ್ಕೂ ಹೆಚ್ಚು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ದೆಹಲಿ ಸರ್ಕಾರ ತಲಾ 5 ಸಾವಿರ ರೂ. ಆರ್ಥಿಕ ನೆರವು ಒದಗಿಸಿದೆ.
ದೇಶಕ್ಕೆ ವಕ್ಕರಿಸಿರುವ ಮಹಾಮಾರಿ ಕರೊನಾ ವೈರಸ್ ಸೋಂಕು ತಡೆಗಟ್ಟಲು ಇಡೀ ದೇಶಕ್ಕೆ ಲಾಕ್ಡೌನ್ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಆರ್ಥಿಕ ಚಟುವಟಿಕೆ ಸ್ತಬ್ಧವಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಅವರ ನೆರವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಧಾವಿಸಿದೆ.

