ಸಿಎಎ ,ಎನ್ ಆರ್ ಸಿ ವಿರೋಧಿಸಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಪ್ರತಿಭಟನೆ..

ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿಂದು ಸಿಎಎ ,ಎನ್ ಆರ್ ಸಿ ವಿರೋಧಿಸಿ ಬಾದಾಮಿಯಲ್ಲಿ ಮೌನ ಮೆರವಣಿಗೆ ಮಾಡಲಾಗುತ್ತಿದೆ. ಬಾದಾಮಿ ಪಟ್ಟಣದ ಅಂಜುಮನ್ ಕಾಲೇಜಿನಿಂದ ಪಿಎಲ್ ಡಿ ಬ್ಯಾಂಕ್ ಆವರಣದವರೆಗೆ ಸಾವಿರಾರು ಮುಸ್ಲಿಂ,ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಮೌನ ಮೆರವಣಿಗೆ ಮಾಡಲಾಗುತ್ತಿದೆ. ಬ್ಯಾನರ್, ಕಟೌಟ್ ಮೂಲಕ  ಮೌನ ಮೆರವಣಿಗೆ ಬಳಿಕ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಿದ್ದಾರೆ.

ಶಿವಮೊಗ್ಗ ನಗರದ ಈದ್ಗಾ ಮೈದಾನದಲ್ಲಿ  ಜಾಯಿಂಟ್ ಅಕ್ಷನ್ ಕಮಿಟಿ ವತಿಯಿಂದ NRC, CAA, NPR, ಮಸೂದೆ ರದ್ದುಗೊಳಿಸಲು ಆಗ್ರಹಿಸಿ ಬೃಹತ್ ಪ್ರತಿಭಟನಾ ಸಭೆ ಆರಂಭಿಸಲಾಗಿದೆ. ಇದು ಸಂವಿಧಾನ ವಿರೋಧಿ, ಮಾನವೀಯತೆ ವಿರೋಧಿ ಎಂದು ಆರೋಪಿಸಿ  ಪ್ರತಿಭಟನಾ ಸಭೆ ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿರುವ ಮುಸ್ಲಿಂ ಭಾಂಧವರು ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ. ಶಿವಮೊಗ್ಗದಲ್ಲಿ ಸೂಕ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿದ್ದಾರೆ.

ಹಾಸನದಲ್ಲಿ  ಪೌರತ್ವ ಕಾಯ್ದೆ ವಿರೋಧಿಸಿ ಮಾಜಿ ಸಚಿವ ಹೆಚ್,ಡಿ,ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ನ ಎಲ್ಲಾ ಶಾಸಕ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗಿಯಾಗಿದ್ದು, ಪೌರತ್ವ ಕಾಯ್ದೆಯಿಂದ ಜಾತ್ಯಾತೀತಕ್ಕೆ ಪೆಟ್ಟು ಬೀಳಲಿದೆ ಎಂದು ಪೌರತ್ವ ಕಾಯ್ದೆ ಪುನರ್ ಪರಿಶೀಲಿಸುವಂತೆ ಒತ್ತಾಯಿಸಿ  ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ರಾಯಚೂರು ಜಿಲ್ಲೆಯ ಮಾನವಿಯಲ್ಲಿ ಎನ್ಆರ್ ಸಿ ಹಾಗು ಸಿಎಎ ಕಾಯ್ದೆ ವಿರೋಧಿಸಿ ದಲಿತ ಹಿಂದುಳಿದ‌ ಅಲ್ಪ ಸಂಖ್ಯಾತ ಸಮನ್ವಯ ಸಮಿತಿಯಿಂದ ಸಮಾವೇಶ ಮಾಡಲಾಗುತ್ತಿದೆ. ಸಮಾವೇಶ ಮುನ್ನ ಬೃಹತ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ. ಮಾನವಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಟಿಎಪಿಎಸ್ ಎಂಎಸ್ ಆವರಣದವರೆಗೂ ನಂತರ ಸಮಾವೇಶ ಮಾಡಲಿದ್ದು, ಹಲವಾರು ಮುಖಂಡರು ಭಾಗಿಯಾಗಲಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ CCA ಮತ್ತು NRC ವಿರೋಧಿಸಿ  ಮುಸ್ಲಿಂ ಮತ್ತು ಪ್ರಗತಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ. CAA ಮತ್ತು NRC ಕಾಯ್ದೆ ಜಾರಿಗೆ ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಜಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದು ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಹೊಡೆಯುವ ಹುನ್ನಾರ. ಕೂಡಲೇ ವಿವಾದಿತ ಕಾಯ್ದೆ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights