ಸಿಎಎ ವಿರುದ್ಧ ಪ್ರತಿಭಟನೆಯ ಆರೋಪಿಗಳಿಗೆ ಜಾಮೀನು : ಪೊಲೀಸರ ವಿರುದ್ಧ FIR
ಸಿಎಎ ವಿರೋಧಿಸಿ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣವಾಗಿದ್ದ ಎನ್ನಲಾದ 22 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್, ಸಾಕ್ಷ್ಯ ಎಂದು ಪರಿಗಣಿಸಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅರೋಪಿಗಳು ನೇರವಾಗಿ ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಏಕಸದಸ್ಯ ಪೀಠ ಅಭಿಪ್ರಾಯಪಟ್ಟು 22 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ಪೊಲೀಸರು ಆರೋಪಿಗಳ ಬಂಧನ ಮಾಡುವಾಗ ಪೊಲೀಸರು ಸರಿಯಾದ ಕ್ರಮವನ್ನು ಕೈಗೊಂಡಿಲ್ಲ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರೋದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಒದಗಿಸಿಲ್ಲದೆ ಇರೋ ಅಂಶಗಳನ್ನು ಪರಿಗಣಿಸಿ ನ್ಯಾಯಲಯ ಎಲ್ಲಾ 22 ಆರೋಪಿಗಳಿಗೆ ಜಾಮೀನನ್ನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳೂರು ಪೊಲೀಸರಿಗೆ ದೊಡ್ಡ ಶಾಕ್ ನೀಡಿದ್ದು, ಗಲಭೆ ನೆಪದಲ್ಲಿ ಪೊಲೀಸರು ಅಮಾಯಕರ ಮೇಲೆ ಹಲ್ಲೆ ಮಾಡಿದ್ದಾರೆ. ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ. ಈ ಹಿಂಸೆ ಅನುಭವಿಸಿದವರು ಪೊಲೀಸರ ವಿರುದ್ಧ ದೂರು ನೀಡಿದರೂ ಎಫ್ಐಆರ್ ದಾಖಲು ಮಾಡುತ್ತಾ ಇಲ್ಲ ಅಂತ ಹೈಕೋರ್ಟ್ ಮೊರೆ ಹೋಗಿದ್ದರು. ಇದನ್ನು ಪರಿಶೀಲಿಸಿದ ನ್ಯಾಯಾಲಯ ಪೊಲೀಸರ ವಿರುದ್ಧ ಎಫ್ಐಆರ್ ದಾಖಲು ಮಾಡೋದಕ್ಕೆ ಸೂಚನೆ ನೀಡಿದೆ.

