ಸಿಲಿಂಡರ್ ಸ್ಪೋಟಿಸಿ ಕಟ್ಟಡ ಕುಸಿತ : 10 ಮಂದಿ ದಾರುಣ ಸಾವು..!
ಉತ್ತರಪ್ರದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಪೋಟಿಸಿ ಕಟ್ಟಡ ಕುಸಿದ ಪರಿಣಾಮ 10 ಮಂದಿ ದಾರುಣವಾಗಿ ಸಾವು ಕಂಡಿದ್ದಾರೆ.
ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿರುವ ಮಾವು ವಲಯದ ಮೊಹಮ್ಮದ ಬಾದ್ ನಲ್ಲಿ ಸೋಮವಾರ ಬೆಳಿಗ್ಗೆ ಘಟನೆ ನಡೆದಿದೆ. ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 10 ಮಂದಿ ಸಾವನ್ನಪ್ಪಿದ್ದಾರೆ.
ಸ್ಪೋಟದ ತೀವ್ರತೆಗೆ ಕಟ್ಟಡ ನೆಲಸಮವಾಗಿದೆ ದುರಂತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.