ಸೋನಿಯಾಗಾಂಧಿ ವಿರುದ್ಧದ ಎಫ್‌ಐಆರ್ ಹಿಂಪಡೆಯಲು ಸಿಎಂ ಸಮ್ಮತಿ: ಬಿಜೆಪಿಯೊಳಗೆ ಬುಗಿಲೆದ್ದ ಆಕ್ರೋಶ

ಮುಖ್ಯಮಂತ್ರಿ ಯಡಿಯೂರಪ್ಪನವರು ಸರ್ವ ಪಕ್ಷಗಳ ಸಭೆ ಕರೆದು ಕೊರೊನಾ ವಿರುದ್ಧದ ಹೋರಾಟದ ಬಗ್ಗೆ ಸಮಾಲೋಚಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧದ ಎಫ್‌ಐಆರ್ ಕೈ ಬಿಡುವುದಾಗಿ ತಿಳಿಸಿದ್ದಾರೆ. ಯಡಿಯೂರಪ್ಪನವರ ಹೇಳಿಕೆಗೆ  ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದರೂ, ಬಿಜೆಪಿಯೊಳಗೆ ಅಸಮಾಧಾನ ಬುಗಿಲೆದ್ದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ  ನೇತೃತ್ವದ ನಿಯೋಗ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸೋನಿಯಾ ವಿರುದ್ಧದ ಎಫ್‌ಐಆರ್ ಕೈ ಬಿಡುವಂತೆ ಮನವಿ ಸಲ್ಲಿಸಿದ್ದರು. ಕಾಂಗ್ರೆಸ್‌ ನಾಯಕರ ಮನವಿಗೆ ಸ್ಪಂದಿಸಿದ್ದ ಸಿಎಂ ಎಫ್‌ಐಆರ್ ಹಿಂಪಡೆಯುವ ಭರವಸೆ ನೀಡಿದ್ದರು. ಆದರೆ ಯಾವುದೇ ಕಾರಣಕ್ಕೂ ಎಫ್‌ಐಆರ್ ವಾಪಸ್ ಪಡೆಯುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ತಬ್ಲಿಘಿಗಳ ವಿರುದ್ಧ ಬಿಜೆಪಿ ನಾಯಕರು ಆರೋಪಗಳ ಸುರಿಮಳೆ ಮಾಡುತ್ತಿದ್ದಾಗ ಕೊರೋನಾ ಸಂದರ್ಭವನ್ನು ಕೋಮುವಾದೀಕರಣ ಗೊಳಿಸುತ್ತಿರುವವರ ವಿರುದ್ಧ  ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ಆದೇಶಿಸಿದ್ದರು.  ಇದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಜೊತೆಗೆ ಸೋನಿಯಾ ವಿರುದ್ಧದ ಎಫ್‌ಐಆರ್ ಕೈ ಬಿಡುವ ಹೇಳಿಕೆ ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights