ಸ್ಯಾಂಡಲ್‌ವುಡ್‌ ಸ್ಟಾರ್ ನಟ ಚಿರಂಜೀವಿ ಸರ್ಜಾ ವಿಧಿವಶ!

ಸ್ಯಾಂಡಲ್‌ವುಡ್‌ ಸ್ಟಾರ್‌ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಸಾಗರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿರಂಚೀವಿ ಸರ್ಜಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ನಿನ್ನೆ ಚಿರಂಜೀವಿ ಸರ್ಜಾ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಆದರೆ ಇನ್ನೂ ಚಿಕ್ಕ ವಯಸ್ಸಾದ್ದರಿಂದ ಮನೆಯವರು ಹೃದಯ ಸಂಬಂಧಿ ಸಮಸ್ಯೆಯಲ್ಲ ಎಂದು ಭಾವಿಸಿದ್ದರು. ಆದರೆ, ಇಂದು ವಿಪರೀತ ಎದೆನೋವು ಎಂದಾಗ ಆಸ್ಪತ್ರೆಗೆ ಕರೆತಂದಿದ್ದಾರೆ.

ಆಸ್ಪತ್ರೆಗೆ ಬರುವ ವೇಳೆಗೆ ಹೃದಯವು ಬಂದ್‌ ಆಗಿತ್ತು. ಆದರೂ ಆಸ್ಪತ್ರೆಯ ವೈದ್ಯರು ರಿವೈವ್ ಮಾಡಲು ಸಾಕಷ್ಟು ಪ್ರಯತ್ನಪಟ್ಟಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗಿಲ್ಲ.

ಚಿರಂಜೀವಿ ಸರ್ಜಾ ಕಳೆದ ದಶಕಗಳಿಂದ ಸ್ಯಾಂಡಲ್‌ವುಡ್‌ನ ಸ್ಟಾರ್ ನಟನಾಗಿ ಮಿಂಚಿದ್ದು, ಪ್ರೇಮಬರಹ, ಅಮ್ಮಾ ಐ ಲವ್‌ ಯೂ ಸೇರಿದಂತೆ ಸುಮಾರು 22 ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಚಿರಂಜೀವಿ ಸರ್ಜಾ ನಿಧನ; ಸರ್ಜಾ ಬದುಕಿನ ಅವಲೋಕನ!

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights