ಹಲ್ಲೆ ಮಾಡಿದ ಉದ್ರಿಕ್ತ ಗುಂಪನ್ನು ಶಿಕ್ಷಿಸಿ – ಮಾಜಿ ಸಿಎಂಗಳಿಂದ ಸಿಎಂಗೆ ಮನವಿ!

ಪಾದರಾಯನಪುರದಲ್ಲಿ ಗಲಾಟೆಗೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸಿ ಎಂದು ಮಾಜಿ ಸಿಎಂಗಳು ಸಿಎಂ ಬಳಿ ಮನವಿ ಮಾಡಿಕೊಂಡಿದ್ದಾರೆ.

ಹೌದು…  ನಗರದ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ ಎಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಸಿಎಂ ಸಿದ್ಧರಾಮಯ್ಯ ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು ಎಂದು ಟ್ವಿಟರ್ ನಲ್ಲಿ ಆಗ್ರಹಿಸಿದ್ದಾರೆ‌.

ಈ ಬಗ್ಗೆ ಟ್ವಿಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಬರೆದು  ಬಿಎಸ್‍ವೈ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಕೊರೊನಾ ಸೋಂಕಿತರು ಹೆಚ್ಚು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾದರಾಯನಪುರವನ್ನು ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲಾಗಿತ್ತು. ಪಾದರಾಯನಪುರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಿ, ಪ್ರಮುಖ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಭಾನುವಾರ ಕೊರೊನಾ ಶಂಕಿತ 58 ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಪುಂಡರು ತಮ್ಮ ಕಿಡಿಗೇಡಿತನವನ್ನು ಪ್ರದರ್ಶಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights