ಹಾವೇರಿಯಲ್ಲಿ ಗುಡುಗು ಸಹಿತ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ
ಹದಿನೈದು ದಿನದಿಂದ ಜಿಲ್ಲೆಯಲ್ಲಿ ಬಿಡುವು ನಿಡಿದ್ದ ಮಳೆರಾಯ ಮತ್ತೆ ತಂಪೆರೆದಿದ್ದಾನೆ. ಹೌದು.. ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಬಾರಿ ಮಳೆಯಾಗಿದೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಳೆ ನೀರು ಚರಂಡಿ ತುಂಬಿ ರಸ್ತೆ ಮೇಲೆ ಹರಿಯುತ್ತಿದ್ದು, ಮನೆಗಳಿಗೆ ನೀರು ಹೊಕ್ಕಿದೆ. ಹಾನಗಲ್ ಬ್ಯಾಡಗಿ ಶಿಗ್ಗಾಂವ ಹಾಗೂ ರಾಣೆಬೆನ್ನೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನ ಕೆಲಸ ಕಾರ್ಯಕ್ರಳಿಗೆ ತೆರಳದಂತಾ ಸ್ಥಿತಿ ನಿರ್ಮಾಣವಾಗಿದೆ.
ಇದೇ ರೀತಿ ಮಳೆ ಮುಂದುವರೆದರೆ ಜನ ವಸತಿಗಳಿಗೆ ನೀರು ನುಗ್ಗಿ ಪರದಾಡುವಂತ ಸ್ಥಿತಿ ನಿರ್ಮಾಣವಾಗುದರಲ್ಲಿ ಸಂಶಯವಿಲ್ಲ.