ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ ನಿಧನ…!

ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ.ಚಿದಾನಂದಮೂರ್ತಿ (88) ಇಂದು ಮುಂಜಾನೆ ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಚಿದಾನಂದಮೂರ್ತಿ ಆಸ್ಪತ್ರೆಯಲ್ಲಿ ಕೊನಯುಸಿರೆಳೆದಿದ್ದಾರೆ. ಪಾರ್ಥಿವ ಶರೀರವನ್ನು 7 ಗಂಟೆಗೆ ಅವರ ನಿವಾಸಕ್ಕೆ ತರಲಾಗುವುದು ಎಂದು ತಿಳಿದುಬಂದಿದೆ.

ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಶ್ರೀ ಎಂ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ.

ಅವರ ಆತ್ಮಕ್ಕೆ ಸದ್ಗತಿ ದೊರಕಲಿ.‌ ಎಂದು ಸಚಿವ ಸುರೇಶ್ ಕುಮಾರ್ ಚಿದಾನಂದಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಚಿದಾನಂದ ಮೂರ್ತಿಯವರು (ಮೇ 10, 1931), ಓರ್ವ ಕನ್ನಡದ ಲೇಖಕ, ವಿದ್ವಾಂಸ, ಸಂಶೋದಕ ಹಾಗು ಇತಿಹಾಸಜ್ಞ. ಕನ್ನಡ ಭಾಷೆ ಹಾಗೂ ಕರ್ನಾಟಕದ ಇತಿಹಾಸದ ಕ್ಷೇತ್ರದಲ್ಲಿ ಪ್ರಸಿದ್ಧಿಯಾಗಿದ್ದಾರೆ. ಇವರು ಹಂಪಿಯ ಸ್ಮಾರಕಗಳನ್ನು ಉಳಿಸಲು ಹಾಗು ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನ ಗಳಿಸಲು ಮಾಡಿದ್ದ ಚಳವಳಿಗೆ ಪ್ರಸಿದ್ಧರಾಗಿದ್ದರು.

1960ರ ಹೊತ್ತಿಗೆ ಮೈಸೂರಿನ ಮಾನಸಗಂಗೋತ್ರಿಯ ಸ್ನಾತಕೋತ್ತರ ಕನ್ನಡ ವಿಭಾಗದ ಅಧ್ಯಾಪಕರಾದರು.

ಕೃತಿಗಳು: ವೀರಶೈವ ಧರ್ಮ,ವಾಗರ್ಥ,ವಕಾನ ಸಾಹಿತ್ಯ ,ಸಂಶೋಧನಾ ತರಂಗ ಸರಸ,ಪಾಂಡಿತ್ಯ ರಸ,ಲಿಂಗಾಯತ ಅಧ್ಯಯನಗಳು,ಕರ್ನಾಟಕ ಸಂಸ್ಕ್ರತಿ,ಹೊಸತು ಹೊಸತು,ಕವಿರಾಜಮಾರ್ಗಕ್ಕೆ ಹಿಂದಿನ ಕನ್ನಡ ಸಾಹಿತ್ಯ,ಕರ್ನಾಟಕ-ನೇಪಾಳ ಪ್ರಸಾರಾಂಗ.

ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಚಿದಾನಂದಮೂರ್ತಿ ಅವರ ನಿಧನಕ್ಕೆ ಸಂತಾಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights