ಹುಬ್ಬಳ್ಳಿ ಬಾಂಬ್ ಸ್ಪೋಟ ಪ್ರಕರಣ- ದೇಶವನ್ನು ಅಭದ್ರಗೊಳಿಸುವ ಕೃತ್ಯ : ವಿಶೇಷ ತನಿಖೆ – ಸುರೇಶ ಚ. ಅಂಗಡಿ

ಹುಬ್ಬಳ್ಳಿಯಲ್ಲಿ ನಿನ್ನೆ ಸಂಭವಿಸಿದ ಬಾಂಬ್ ಸ್ಪೋಟದ ಕುರಿತು ತನಿಖೆ ನಡೆಯುತ್ತಿದೆ. ರೇಲ್ವೆ ಎಸ್ಪಿ ಅಲ್ಲಿಯೇ ಇದ್ದಾರೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ದೇಶವನ್ನು ಅಭದ್ರಗೊಳಿಸುವ ನಿಟ್ಟಿನಲ್ಲಿ ದುಷ್ಕರ್ಮಿಗಳು ಇಂಥ ಕೃತ್ಯ ನಡೆಸುತ್ತಿದ್ದಾರೆ ಎಂದು ಕೇಂದ್ರ ರೇಲ್ವೆ ಖಾತೆ ಸಹಾಯಕ ಸಚಿವ ಸುರೇಶ ಚ. ಅಂಗಡಿ ತಿಳಿಸಿದ್ದಾರೆ.

ವಿಜಯಪುದಲ್ಲಿ ಮಾತನಾಡಿದ ಅವರು, ಇಂಥ ಪಟ್ಟಭದ್ರ ಹಿತಾಸಕ್ತಿಗಳಿಗೆ ಮಟ್ಟ ಹಾಕಲು ಸಾರ್ವಜಿಕರ ಸಹಕಾರ ಅಗತ್ಯವಿದೆ. ಈ ಘಟನೆಯನ್ನು ಖಂಡಿಸುತ್ತೇನೆ. ಈ ಘಟನೆಯ ಬಗ್ಗೆ ವಿಶೇಷ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು
ರೇಲ್ವೆಯಲ್ಲಿ ನಿಲ್ದಾಣದಲ್ಲಿ ಭದ್ರತೆ, ಶಿಸ್ತು, ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ.

ಎಲ್ಲ ರೈಲು ನಿಲ್ದಾಣಗಳಲ್ಲಿ ವೈಫೈ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಬರುವ ದಿನಗಳಲ್ಲಿ ಸಿಸಿಟಿವಿ ಅಳವಡಿಸಲಾಗುವುದು. ಮುಂದಿನ 10 ವರ್ಷಗಳಲ್ಲಿ ರೂ. 50 ಲಕ್ಷ ಕೋಟಿ ವೆಚ್ಚದಲ್ಲಿ ರೇಲ್ವೆಯನ್ನು ನಿರ್ವಹಣೆ ಮಾಡಲಾಗುವುದು. ಇದರಕಿಂದ ಉದ್ಯೋಗಾವಕಾಶಗಳು ಸಿಗಲಿವೆ. ಈ ಹಿಂದೆ ವಾಜಪೇಯಿ ರಸ್ತೆಗಳ ಮೂಲಕ ದೇಶವನ್ನು ಒಂದುಗೂಡಿಸಿದರೆ, ಪ್ರಧಾನಿ ನರೇಂದ್ರ ಮೋದಿ ರೇಲ್ವೆ ಸಂಪರ್ಕ ಕಲ್ಪಿಸುವ ಮೂಲಕ ದೇಶವನ್ನು ಒಂದುಗೂಡಿಸುತ್ತಿದ್ದಾರೆ ಎಂದು ತಿಳಿಸಿದರು.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights