ಹೆಚ್ಚಾದ ಕೋವಿಡ್-19 ಸೋಂಕು : ಮೃತರ ಸಂಖ್ಯೆ 2,100ಕ್ಕೇರಿಕೆ!

ದಿನೇ ದಿನೇ ಕೊರೊನಾ ಸೋಂಕು ಹೆಮ್ಮರವಾಗಿ ಬೆಳೆಯುತ್ತಿದ್ದು ಸಾವಿರಾರು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಷ್ಟು ಮಾತ್ರವಲ್ಲದೇ ಮೃತರ ಸಂಖ್ಯೆ 2,100ಕ್ಕೇ ಏರಿದ್ದು 75,000ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದು ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ ಮಾರಕ ಕೊರೋನಾ ವೈರಾಣು(ಕೋವಿಡ್-19) ಸೋಂಕಿನಿಂದಾಗಿ ಚೀನಾದ ವಿವಿಧ ಪ್ರಾಂತ್ಯಗಳಲ್ಲಿ ಸಾವಿನ ಸರಣಿ ಮುಂದುವರಿದಿದೆ.

ಸಾವಿನ ಮನೆಯಂತಾಗಿರುವ ವುಹಾನ್ ಸೇರಿದಂತೆ ಹೆಬೀ ಪ್ರಾಂತ್ಯದ ವಿವಿಧೆಡೆ ಹೊಸ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗುತ್ತಲೇ ಇದ್ದು, ಮರಣ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.

ಈ ಪ್ರಾಂತ್ಯದಲ್ಲಿ ನಿನ್ನೆ ಒಂದೇ ದಿನ 1,750ಕ್ಕೂ ಹೆಚ್ಚು ರೋಗ ಪ್ರಕರಣಗಳು ದೃಢಪಟ್ಟಿದ್ದು, ಇವರಲ್ಲಿ 100ಕ್ಕೂ ಅಧಿಕ ಜನರು ಸಾವಿಗೀಡಾಗಿದ್ದಾರೆ. ರೋಗ ಪೀಡಿತರ ಒಟ್ಟು ಸಂಖ್ಯೆ 75,000 ದಾಟಿರುವುದು ಪರಿಸ್ಥಿತಿಯ ಭೀಕರತೆಗೆ ಸಾಕ್ಷಿಯಾಗಿದೆ.

ಹೆಬೀ ಪ್ರಾಂತ್ಯದ ವುಹಾನ್‍ನ ಆಸ್ಪತ್ರೆಗಳು ಕೊರೋನಾ ವೈರಸ್ ರೋಗಿಗಳಿಂದ ತುಂಬಿ ತುಳುಕುತ್ತಿದೆ. ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಏರುತ್ತಿರುವುದು ವೈದ್ಯಕೀಯ ಸಿಬ್ಬಂದಿಗೆ ಶೂಶ್ರುಷೆ ಮಾಡಲು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights