ಹೆಣ್ಣುಮಕ್ಕಳ ವಿವಾಹದ ಕನಿಷ್ಠ ವಯೋಮಿತಿ ಪರಿಶೀಲನೆಗೆ ಸಮಿತಿ: ಮೋದಿ

ಹೆಣ್ಣು ಮಕ್ಕಳ ವಿವಾಹದ ಕನಿಷ್ಠ ವಯೋಮಿತಿಯ ಪುನರ್ ಪರಿಶೀಲನೆಗೆ ಸಮಿತಿ  ರಚಿಸಲಾಗಿದ್ದು, ಸಮಿತಿ ವರದಿ ಸಲ್ಲಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ ಮಾತನಾಡಿದ ಮೋದಿ, ‘ಸ್ತ್ರೀಯರ ವಿವಾಹದ ಕನಿಷ್ಠ ವಯೋಮಿತಿ ಮರುಪರಿಶೀಲಿಸಲು ಈಗಾಗಲೇ ಸಮಿತಿಯನ್ನು ರಚಿಸಲಾಗಿದೆ.  ಸಮಿತಿ ತನ್ನ ವರದಿಯನ್ನು ಸಲ್ಲಿಸಿದ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.

ಮಹಿಳೆಯರು ಭಾರತ ಹೆಮ್ಮೆ ಪಡುವಂತಹ ಸಾಧನೆಗಳನ್ನು ಮಾಡುತ್ತಿದ್ದಾರೆ. ಆ ಮೂಲಕ ಭಾರತವನ್ನು ಬಲಪಡಿಸುವ ಕೆಲಸ ಮಾಡುತ್ತಿದ್ದಾರೆ. ದೇಶವು ಅವರಿಗೆ ಸ್ವಯಂ ಉದ್ಯೋಗ ಮತ್ತು ಉದ್ಯೋಗದ ಸಮಾನ ಅವಕಾಶಗಳನ್ನು ನೀಡುತ್ತಿದೆ.  ದೇಶದ ಹೆಣ್ಣುಮಕ್ಕಳು ಯುದ್ಧ ವಿಮಾನವನ್ನು ಹಾರಿಸುತ್ತಿದ್ದು, ಆಗಸ ಮುಟ್ಟುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಹೆಣ್ಣುಮಕ್ಕಳಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ಒಂದು ರೂಪಾಯಿಗೆ ಒದಗಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights