14 ದಿನಗಳ ಕ್ವಾರಂಟೈನ್ ಸಡಿಲಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಆದೇಶ..

ದೇಶದಲ್ಲಿ ಹೊರ ರಾಜ್ಯಗಳಿಂದ ಬಂದವರಲ್ಲಿ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು ತಿಳಿದು ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಲಾಕ್ ಡೌನ್ 4.0 ಸಡಿಲಿಕೆಗೊಂಡಾಗಿನಿಂದಲೂ ಬೇರೆ ಬೇರೆ ರಾಜ್ಯಗಳಿಂದ ಬರುವವರಲ್ಲಿ ಸೋಂಕು ಹೆಚ್ಚಾಗಿದ್ದರೂ ಆರೋಗ್ಯ ಇಲಾಖೆ ಬೆರೆ ರಾಜ್ಯಗಳಿಂದ ಬರುವವರಿಗೆ 14 ದಿನಗಳ ಕ್ವಾರಂಟೈನ್ ಹಿಂಪಡೆದಿದೆ. 14 ದಿನಗಳ ಕ್ವಾರಂಟೈನ್ ಕಾಲವಧಿಯನ್ನು 7 ದಿನಕ್ಕೆ ಇಳಿಕೆ ಮಾಡಿದೆ. ಜೊತೆಗೆ 5 ಅಥವಾ 7 ದಿನಕ್ಕೆ ಅವರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಲಾಗಿದೆ.

ಹೆಚ್ಚು ಕೊರೊನಾ ಸೋಂಕಿತರಿರುವ ರಾಜ್ಯಗಳಾದ ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ಆಗಮಿಸುವವರಿಗೆ 7 ದಿನ ಸಾಂಸ್ಥಿಕ ಹಾಗೂ ಹೋ ಕ್ವಾರಟೈಂಟ್ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಸೋಂಕು ಹೆಚ್ಚಿರುವ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಂದ ಆಗಮಿಸುವವರಿಗೆ 14 ದಿನಗಳ ಹೋಂ ಕ್ವಾರಂಟೈನ್ ವಿಧಿಸಲಾಗುವುದು. ಈ ವೇಳೆ ಅವರ ಮೇಲೆ ಸ್ಥಳೀಯ ಆರೋಗ್ಯ ಸಿಬ್ಬಂದಿ ನಿಗಾ ವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಈ ನಿಯಮ ಉದ್ಯಮಿಗಳಿಗೆ ಅನ್ವಯವಾಗುವುದಿಲ್ಲ. ಆದರೆ ಅವರುಗಳು ಕೊರೊನಾ ಪರೀಕ್ಷೆ ಮಾಡಿಸಿದ 2 ದಿನದ ಒಳಗಿನ ನೆಗೆಟಿವ್ ವರದಿಯನ್ನು ಸಲ್ಲಿಸಬೇಕು. ಇನ್ನು ವೈದ್ಯಕೀಯ ಸಿಬ್ಬಂದಿ, ರಕ್ಷಣಾ ಸಿಬ್ಬಂದಿ, ಗರ್ಭಿಣಿಯರು, ವಯಸ್ಕರು, 10 ವರ್ಷ ಒಳಗಿನ ಮಕ್ಕಳು, ಗಂಭೀರ ಆರೋಗ್ಯ ಸಮಸ್ಯ ಉಳ್ಳವರಿ್ಎ ವಿನಾಯತಿ ನೀಡಲಾಗಿದೆ. ಇವರು ಹದಿನಾಲ್ಕು ದಿನಗಳ ಕಾಲ ಹೋ ಕ್ವಾರಂಟೈನ್ ನಲ್ಲಿರಬಹುದು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights