24 ಗಂಟೆಯಲ್ಲಿ 1,429 ಹೊಸ ಕೊರೊನಾ ಪ್ರಕರಣಗಳು ದೃಢ : ದೇಶದಲ್ಲಿ 24,506ಕ್ಕೇರಿದ ಸೋಂಕಿತರ ಸಂಖ್ಯೆ!

ಭಾರತದಲ್ಲಿ ಕೊರೊನಾ ಕಡಿಮೆಯಾಗುವ ಲಕ್ಷಣವಿರಲಿ ದಿನದಿಂದ ದಿನಕ್ಕೆ ಸೋಂಕಿರು ಹಾಗೂ ಸಾವಿನ ಸಂಖ್ಯೆ ಉಲ್ಬಣಗೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57 ಜನ  ಕೊರೊನಾಗೆ ಬಲಿಯಾಗಿದ್ದು,1,429 ಹೊಸ ಪ್ರಕರಣಗಳು ದಾಖಲಾಗಿದ್ದು ಇದೇ ಮೊದಲ ಬಾರಿಗೆ.

ಹೌದು.. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.ಬರೋಬ್ಬರಿ 1,429 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈವರೆಗೆ 775 ಮಂದಿಯನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದ್ದು, ಈವರೆಗೆ 6,817 ಮಂದಿಗೆ ಸೋಂಕು ತಗುಲಿದ್ದು, 301 ಮಂದಿ ಸಾವನ್ನಪ್ಪಿದ್ದಾರೆ. ಹೆಚ್ಚು ಸೋಂಕು ಹರಡಿರುವ ರಾಜ್ಯಗಳ ಪಟ್ಟಿಯಲ್ಲಿ ಗುತರಾತ್ 2ನೇ ಸ್ಥಾನದಲ್ಲಿದ್ದು, ಅಲ್ಲಿ 2,815 ಮಂದಿ ಕೊರೊನಾಗೆ ತುತ್ತಾಗಿದ್ದು, 127 ಮಂದಿ ಸಾವನ್ನಪ್ಪಿದ್ದಾರೆ.ಕಳೆದ 24 ಗಂಟೆಯಲ್ಲಿ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 24,506ಕ್ಕೆ ಏರಿದೆ.

ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 2,514ಕ್ಕೆ ಏರಿದ್ದು, 53 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜಸ್ಥಾನದಲ್ಲಿ 2,059 ಮಂದಿಗೆ ಸೋಂಕು ತಗುಲಿದ್ದು, 32 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ ಈವರೆಗೆ 489 ಮಂದಿ ಕೊರೊನಾಗೆ ತುತ್ತಾಗಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 15 ಹೊಸ ಪ್ರಕರಣಗಳು ವರದಿಯಾಗಿದ್ದು, ಈವರೆಗೆ 153 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕೇರಳದಲ್ಲಿ  ಈವರೆಗೆ 450 ಮಂದಿಗೆ ಸೋಂಕು ತಗುಲಿದ್ದು, 3 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ 331 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದ್ದು ಕೊಂಚ ನಿಯಂತ್ರಣಕ್ಕೆ ಬಂದಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights