24 ಗಂಟೆಯಲ್ಲಿ 49 ಮಂದಿ ಕೊರೊನಾಗೆ ಬಲಿ : ದೇಶದಲ್ಲಿ 26 ಸಾವಿರ ಗಡಿ ದಾಡಿದ ಸೋಂಕಿತರ ಸಂಖ್ಯೆ​!

ಭಾರತದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು ಕೊರೊನಾ ಕಡಿಮೆಯಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹಾಗೂ ಮೃತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಕಳೆದ 24 ಗಂಟೆಯಲ್ಲಿ 49 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 1,990 ಹೊಸ ಸೋಂಕಿತ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ  ಸೋಂಕಿತರ ಸಂಖ್ಯೆ 26,496ಕ್ಕೆ ಏರಿದೆ.

ದೇಶದಲ್ಲಿ 26 ಸಾವಿರ ಕೊರೋನಾ ವೈರಸ್​ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 19,868 ಆಕ್ಟಿವ್​ ಕೇಸ್​ಗಳಿವೆ. 824 ಜನರು ಮೃತಪಟ್ಟಿದ್ದಾರೆ. 5,803 ಜನರು ಕೊರೋನಾ ಮುಕ್ತರಾಗಿ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಇಲಾಖೆ ಇಂದಿನ ಮಾಹಿತಿ ನೀಡಿದೆ.

ಲಾಕ್ ಡೌನ್ ಜಾರಿಯಲ್ಲಿದ್ದರೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕಮುಖ ಕಂಡಿಲ್ಲ. ಒಂದು ವೇಳೆ ಲಾಕ್ ಡೌನ್ ಜಾರಿಯಲ್ಲಿ ಇಲ್ಲದೇ ಇದ್ದಿದ್ದರೆ ಪರಿಸ್ಥಿತಿ ಕೈಮೀರಿ ಹೋಗ್ತಾಯಿತ್ತೆನೋ. ಹೀಗಾಗಿ ದೇಶವನ್ನೇ ಲಾಕ್​ಡೌನ್​ ಮಾಡಿದರೂ ವೈರಸ್​ ನಿಯಂತ್ರಣಕ್ಕೆ ಬರುತ್ತಿಲ್ಲ. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.

ಮಹಾರಾಷ್ಟ್ರ, ದೆಹಲಿ, ಗುಜರಾತ್, ಮಧ್ಯಪ್ರದೇಶ ಮತ್ತು ತೆಲಂಗಾಣ ರಾಜ್ಯದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ದೇಶದ ವಿವಿಧ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರ ಒಂದು ರಾಜ್ಯದಲ್ಲಿಯೇ ಶೇ. 13.8ರಷ್ಟು ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇತ್ತ ಮುಂಬೈ ನಗರದಲ್ಲಿಯೇ ಶೇ. 47.6ರಷ್ಟು ಪ್ರಕರಣಗಳು ವರದಿಯಾಗಿದೆ. ಕೊರೊನಾ ಅತೀ ವೇಗವಾಗಿ ಹರಡುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಗುಜರಾತ್ ಎರಡನೇ ಸ್ಥಾನದಲ್ಲಿದ್ದು, ಅಹಮದಾಬಾದ್‍ನಲ್ಲಿ ಶೇ. 62ರಷ್ಟು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಮಹಾರಾಷ್ಟ್ರದಲ್ಲಿ 7,628 ಮಂದಿಗೆ ಸೋಂಕು ತಗುಲಿದ್ದು, 323 ಮಂದಿ ಸಾವನ್ನಪ್ಪಿದ್ದಾರೆ. 1,076 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುಜರಾತ್‍ನಲ್ಲಿ 3,071 ಮಂದಿ ಕೊರೊನಾಗೆ ತುತ್ತಾಗಿದ್ದು, 133 ಮಂದಿ ಸಾವನ್ನಪ್ಪಿದ್ದಾರೆ.

ಇತ್ತ ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 2,625ಕ್ಕೆ ಏರಿದ್ದು, 54 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ರಾಜಸ್ಥಾನದಲ್ಲಿ 2,141 ಮಂದಿಗೆ ಸೋಂಕು ತಗುಲಿದ್ದು, 35 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಕರ್ನಾಟಕದಲ್ಲಿ ಈವರೆಗೆ 500 ಮಂದಿ ಕೊರೊನಾಗೆ ತುತ್ತಾಗಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ 158 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ವಿಶ್ವದಲ್ಲಿ ಈ ವೈರಸ್​ನಿಂದ ಮೃತಪಟ್ಟವರ ಸಂಖ್ಯೆ ಎರಡು ಲಕ್ಷ ದಾಟಿದರೆ, ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ಸಮೀಪಿಸಿದೆ.

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಕೊರೋನಾ ಸೋಂಕು ಮಿತಿಮೀರಿ ಹಬ್ಬುತ್ತಿದೆ. ಪ್ರತಿನಿತ್ಯ ಅಮೆರಿಕದಲ್ಲಿ 1.5-2 ಸಾವಿರ ಮಂದಿ ಮೃತಪಡುತ್ತಿದ್ದಾರೆ. ಹೀಗಾಗಿ ಅಮೆರಿಕದಲ್ಲಿ ಸಾವಿನ ಸಂಖ್ಯೆ 54 ಸಾವಿರಕ್ಕೆ ಏರಿಕೆ ಆಗಿದೆ. 9.6 ಲಕ್ಷ ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights