47ನೇ ವಸಂತಕ್ಕೆ ಕಾಲಿಟ್ಟ ಸಚಿನ್ ತೆಂಡೂಲ್ಕರ್ : ಕ್ರಿಕೆಟ್ ದಿಗ್ಗಜನಿಗೆ ಹರಿದು ಬಂತು ಶುಭಾಷಯಗಳ ಮಹಾಪೂರ

ಭಾರತದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಏಪ್ರಿಲ್ 24ಕ್ಕೆ ಸಚಿನ್ 47ರ ಹರೆಯಕ್ಕೆ ಕಾಲಿರಿಸಿದ್ದಾರೆ. ಆದರೆ ಕೋವಿಡ್-19 ಪಿಡುಗಿನ ವಿರುದ್ಧ ಹೋರಾಡುತ್ತಿರುವವರಿಗೆ ಗೌರವ ಸೂಚಿಸಿ ಸಚಿನ್ ತನ್ನ ಹುಟ್ಟುಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ. ಇವರ ಈ ಈ ನಿರ್ಧಾರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಕ್ರಿಕೆಟ್ ದಿಗ್ಗಜನಿಗೆ ಶುಭಾಷಯಗಳ ಮಹಾಪೂರವೇ ಹರಿದು ಬಂದಿದೆ.

ತಮ್ಮ ವಿಶಿಷ್ಟ ಬ್ಯಾಟಿಂಗ್ ಶೈಲಿಯ ಮೂಲಕ ವಿಶ್ವದಲ್ಲೇ ಅಪಾರ ಅಭಿಮಾನಿಗಳನ್ನು ಹೊಂದಿರುವ ಮಾಸ್ಟರ್ ಬ್ಲಾಸ್ಟರ್ ತೆಂಡೂಲ್ಕರ್ ಅವರಿಗೆ ಮಾಜಿ ಹಾಗೂ ಹಾಲಿ ಆಟಗಾರರು ಶುಭಾಷಯ ನೀಡುತ್ತಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಸ್ಟಾರ್ ಕ್ರಿಕೆಟಿಗನ ಹುಟ್ಟು ಹಬ್ಬಕ್ಕೆ ವಿಶೇಷವಾಗಿ ಶುಭಾಶಯ ತಿಳಿಸಿವೆ. ಉಳಿದಂತೆ ಟೀಮ್ ಇಂಡಿಯಾದ ಹಾಲಿ ಕೋಚ್ ರವಿ ಶಾಸ್ತ್ರಿ, ಸ್ಟಾರ್ ಆಲ್ ರೌಂಡರ್ ಯುವರಾಜ್ ಸಿಂಗ್, ಬಾಲ್ಯ ಗೆಳೆಯ ವಿನೋದ್ ಕಾಂಬ್ಳೆ, ಮಹೇಂದ್ರ ಸಿಂಗ್ ಧೋನಿ, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಶುಭ ಕೋರಿದ್ದಾರೆ.

ಸಚಿನ್ ತೆಂಡೂಲ್ಕರ್ ತಮ್ಮ ಚಮತ್ಕಾರಿ ಬ್ಯಾಟಿಂಗ್ ಬಲದಿಂದ ಹಲವು ಪ್ರಥಮಗಳನ್ನು ಸೃಷ್ಟಿಸಿದ್ದಾರೆ. ಸಚಿನ್ 200 ಟೆಸ್ಟ್ ಪಂದ್ಯಗಳನ್ನು ಆಡಿದ್ದು ದಾಖಲೆಯ 51 ಶತಕ, 68 ಅರ್ಧಶತಕ ಸೇರಿದಂತೆ 15,921 ರನ್ ಸಿಡಿಸಿದ್ದಾರೆ. ಅಲ್ಲದೆ 46 ವಿಕೆಟ್ ಪಡೆದು ಬೀಗಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ಮುಂಬೈಕರ್ 463 ಪಂದ್ಯಗಳಲ್ಲಿ 49 ಶತಕ ಹಾಗೂ 96 ಅರ್ಧಶತಕ ಸಿಡಿಸಿದ್ದು, 18,426 ರನ್ ಬಾರಿಸಿದ್ದು, 154 ವಿಕೆಟ್ ಕಬಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights