50,000 ಕೋಟಿ ರೂಗಳ ಉದ್ಯೋಗ ಯೋಜನೆಗೆ ಮೋದಿ ಚಾಲನೆ!

ಲಾಕ್’ಡೌನ್ ಸಂಕಷ್ಟಕ್ಕೆ ತುತ್ತಾಗಿ, ಹಸಿವು, ಪ್ರಾಣಹಾನಿಯನ್ನೂ ಎದುರಿಸಿ ತಮ್ಮ ರಾಜ್ಯಗಳಿಗೆ ಮರಳಿದ ವಲಸೆ ಕಾರ್ಮಿಕರಿಗೆ ನೆರವಾಗಲು ಪ್ರಧಾನಿ ಮೋದಿಯವರು ಆರ್ಥಿಕ ನೆರವು ಘೋಷಿಸಿದ್ದಾರೆ. ಗರೀಬ್‌ ಕಲ್ಯಾಣ್ ಯೋಜನೆಯ ಅಡಿಯಲ್ಲಿ 50 ಸಾವಿರ ಕೋಟಿ ರೂಗಳ ಉದ್ಯೋಗ ಯೋಜನೆಗೆ ಚಾಲನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಗೆ ಚಾಲನೆ ನೀಡಿರುವ ಪ್ರಧಾನಿ ಮೋದಿಯವರು, ಯುವಕರು ಮತ್ತು ಮಹಿಳೆಯರಿಗೆ ಇಂದು ಐತಿಹಾಸಿಕ ದಿನವಾಗಿದೆ. ಲಾಕ್’ಡೌನ್ ಸಮಯದಲ್ಲಿ ಜನರು ಹೆಚ್ಚು ಸಂಖ್ಯೆಯಲ್ಲಿ ಗ್ರಾಮಗಳಿಗೆ ಮರಳಿದ್ದಾರೆ. ತಮ್ಮ ಶ್ರಮ ಹಾಗೂ ಕೌಶಲ್ಯದ ಮೂಲಕ ಗ್ರಾಮವನ್ನು ಅಭಿವೃದ್ಧಿ ಪಡಿಸಲು ಈ ಯೋಜನೆ ಅನುಕೂಲ ಮಾಡಿಕೊಡಲಿದೆ. ಜನರ ಭಾವನೆ ಹಾಗೂ ಅಗತ್ಯತೆಗಳನ್ನು ದೇಶ ಅರ್ಥಮಾಡಿಕೊಳ್ಳುತ್ತದೆ. 6 ರಾಜ್ಯಗಳ 116 ಗ್ರಾಮಗಳಲ್ಲಿ ಯೋಜನೆ ಮುನ್ನಡೆಯಲಿದೆ ಎಂದು ಹೇಳಿದ್ದಾರೆ.

ಗರೀಬ್ ಕಲ್ಯಾಣ ರೋಜಗಾರ್ ಅಭಿಯಾನ ಇದಾಗಿದ್ದು, ಹೆಚ್ಚಿನ ವಲಸೆ ಕಾರ್ಮಿಕರು ಇರುವ ಬಿಹಾರ, ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ತಾನ, ಜಾರ್ಖಂಡ್ ಮತ್ತು ಒಡಿಶಾ ಈ 6 ರಾಜ್ಯಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಲಾಗಿದೆ. ಯೋಜನೆಯಡಿ ತವರಿಗೆ ಮರಳಿದ ವಲಸೆ ಕಾರ್ಮಿಕರ ಜೀವನಾಧಾರಕ್ಕಾರಿ 125 ದಿನಗಳ ಉದ್ಯೋಗವನ್ನು ಒದಗಿಸಲಾಗುತ್ತದೆ.

ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿಯ ಕುರಿತು ಮಾತನಾಡಿದ ಮೋದಿ,  ನಗರಗಳಿಗಿಂತ ಹಳ್ಳಿಗಳಲ್ಲಿ ಇಂಟರ್ನೆಟ್ ಹೆಚ್ಚು ಬಳಸಲಾಗುತ್ತಿದೆ ಮತ್ತು ಈಗ ಇಂಟರ್ನೆಟ್ ವೇಗವನ್ನು ಹೆಚ್ಚಿಸುವ ಕೆಲಸವನ್ನು ಈ ಯೋಜನೆಯ ಸಹಾಯದಿಂದ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಬಿಹಾರದ ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಜಾರ್ಖಂಡ್ ಮತ್ತು ಒಡಿಶಾ ಸಚಿವರ ಐದು ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಬಿಹಾರದ ಕತಿಹಾರ್ ಗ್ರಾಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ‘ಗರಿಬ್ ಕಲ್ಯಾಣ್ ರೋಜ್ಗರ್ ಅಭಿಯಾನ್’ ಅನ್ನು ಮೋದಿಯವರು ಪ್ರಾರಂಭಿಸಿದರು. ಈ ಆರು ರಾಜ್ಯಗಳ 116 ಜಿಲ್ಲೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದ್ದು, ಆ ರಾಜ್ಯಗಳಿಗೆ ಗರಿಷ್ಠ ಸಂಖ್ಯೆಯ ವಲಸೆ ಕಾರ್ಮಿಕರು ಮರಳಿದ್ದಾರೆ ಎಂದು ಹೇಳಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights