’55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಗಳು ಕೊರೊನಾ ಕರ್ತವ್ಯ ನಿರ್ವಹಿಸುವಂತಿಲ್ಲ’

ಕೋವಿಡ್-19 ಅತೀ ಹೆಚ್ಚು ಪರಿಣಾಮ ಬೀರುವುದು ವಯಸ್ಕರ ಮೇಲೆ. ಹೀಗಾಗಿ ಕೊರೊನಾ ಸೋಂಕು ತಡೆಯ ಹೋರಾಟದಲ್ಲಿ ಮುಂಚುಣಿಯಲ್ಲಿರುವ ಪೊಲೀಸರ ರಕ್ಷಣೆಯ ಬಗ್ಗೆ ರಾಜ್ಯ ಪೊಲೀಸ್ ಇಲಾಖೆ ಯೋಚನೆ ಮಾಡಿದೆ.

ಹೌದು… ಕಿಲ್ಲರ್ ಕೊರೊನಾ ಹರಡದಂತೆ ತಡೆಯುವ ವೃತ್ತಿಯಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಜನರ ಸುರಕ್ಷತೆಗಾಗಿ ಬೀದಿಗಿಳಿದು ನಿತ್ಯ ಕರ್ತುವ್ಯದಲ್ಲಿ ಭಾಗಿಯಾಗುವ 55 ವರ್ಷ ಮೇಲ್ಪಟ್ಟ ಪೊಲೀಸರ ಹಿತದೃಷ್ಟಿಯಿಂದ ಕೊರೊನಾ ಕಾರ್ಯಾಚರಣೆಯಲ್ಲಿ ನಿಯೋಜಿಸದಂತೆ ರಾಜ್ಯ ಪೊಲೀಸ್ ಮಹಾನಿದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ವಯಸ್ಸಾದಂತೆ ಕೆಲವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುತ್ತಾರೆ.ಮಧುಮೇಹ, ರಕ್ತದೊತ್ತಡ, ಅಸ್ತಮಾ, ಕಿಡ್ನಿ ಹಾಗೂ ಯಕೃತ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ರಸ್ತೆಯ ಮೇಲಿನ ತಪಾಸಣೆ ಮತ್ತಿತರ ಕರ್ತವ್ಯಗಳಿಗೆ ನಿಯೋಜಿಸಬಾರದು. ಅಂತಹ ಸಿಬ್ಬಂದಿಯನ್ನು ಪೊಲೀಸ್ ಠಾಣೆಯ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಕರ್ತವ್ಯಕ್ಕೆ ಹಾಕಬೇಕು ಎಂದು ಪ್ರವೀಣ್ ಸೂದ್ ಆದೇಶದಲ್ಲಿ ತಿಳಿಸಿದ್ದಾರೆ.

ವಯಸ್ಸಾದವರನ್ನು ಹಾಗೂ ಕಾಯಿಲೆ ಇರುವವರನ್ನ ಕೋವಿಡ್ ಬಾಧಿಸುವುದು ಹೆಚ್ಚು. ಸಿಬ್ಬಂದಿಯ ಆರೋಗ್ಯ ಕಾಪಾಡುವುದು ನಮ್ಮ ಕೆಲಸವಾಗಿದೆ. ಹೀಗಾಗಿ 55 ವರ್ಷ ಮೇಲ್ಪಟ್ಟವರನ್ನ ರಸ್ತೆ,  ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ಕರ್ತವ್ಯಕ್ಕೆ ಹಾಕಬಾರದು. ಸ್ಟೇಷನ್ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಡ್ಯೂಟಿ ಒದಗಿಸಬೇಕು ಎಂದು ರಾಜ್ಯದ ಎಲ್ಲಾ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights