60 ವರ್ಷ ಮೇಲ್ಪಟ್ಟ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಔಷಧ!

ಬೆಂಗಳೂರಿನಲ್ಲಿ ವಾಸಿಸುತ್ತಿರುವ 60 ವರ್ಷ ಮೇಲ್ಪಟ್ಟ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಔಷಧ ನೀಡಲಾಗುವುದು. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಾರ್ಡ್‌‌ಗಳಲ್ಲೂ ಜನೌಷಧ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ್ ತಿಳಿಸಿದ್ದಾರೆ.

ಬಿಬಿಎಂಪಿ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿರುವ ಅಶ್ವತ್‌ ನಾರಾಯಣ್‌ ಅವರು, “ನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಆಸ್ಪತ್ರೆಗಳಿಗೆ ಅಗತ್ಯವಿರುವ ಅಕ್ಸಿಜನ್, ಔಷಧಿಗಳು, ಸಿಬ್ಬಂದಿ, ಪಿಪಿಇ ಕಿಟ್ ಒದಗಿಸುವುದು ಸೇರಿದಂತೆ ಎಲ್ಲಾ ಅವಶ್ಯಕತೆಗಳನ್ನ ಬಿಬಿಎಂಪಿ ಹೆಲ್ತ್ ಕೇರ್ ಹೆಸರಲ್ಲಿ ಸದೃಢಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆರು ನಗರದಾದ್ಯಂತ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಔಷಧ ಪೂರೈಕೆ ಸರಿಯಾಗಿ ಅಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಈ ಸಮಸ್ಯೆಯನ್ನು ಶೀಘ್ರದಲ್ಲಿ ಸರಿಪಡಿಸಲಾಗುವುದು. 60 ವರ್ಷ ಮೇಲ್ಪಟ್ಟ ಹಾಗೂ ಬಿಪಿಎಲ್ ಕಾರ್ಡ್ ಉಳ್ಳವರಿಗೆ ಉಚಿತ ಔಷಧ ನೀಡಲಾಗುವುದು. ಅಲ್ಲದೆ, ನಗರದ ಎಲ್ಲಾ ವಾರ್ಡ್‌‌ಗಳಲ್ಲೂ ಜನೌಷಧ ಕೇಂದ್ರ ತೆರೆಯಲಾಗುವುದು” ಎಂದು ಆಶ್ವಾಸನೆ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights