CBSE ಪರೀಕ್ಷೆಗಳಿಗೆ ಡೇಟ್ ಫಿಕ್ಸ್: ಯಾವಾಗಿಂದ ಪರೀಕ್ಷೆಗಳು ಆರಂಭ?
ಲಾಕ್‌ಡೌನ್‌ನಿಂದಾಗಿ ಮುಂದೂಡಲಾಗಿದ್ದ CBSE ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆ ದಿನಾಂಕ ನಿಗಧಿ ಮಾಡಿದೆ. ಇದರಿಂದಾಗಿ CBSE ವಿದ್ಯಾರ್ಥಿಗಳಿಗೆ ಪರೀಕ್ಷೆಯ ಬಗೆಗಿದ್ದ ಗೊಂದಲಕ್ಕೆ ತೆರೆ ಎಳೆದಂತಾಗಿದ್ದು, ವಿದ್ಯಾರ್ಥಿಗಳಿಗೆ ರಿಲೀಫ್ ಸಿಕ್ಕಂತಾಗಿದೆ.
ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ಸಡಿಲಿಕೆ ನೀಡಲಾಗಿದ್ದು, ಎಲ್ಲವೂ ಎಥಾಸ್ಥಿತಿಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸಲು ದಿನಾಂಕ ನಿಗಧಿಯಾಗಿದೆ.
ಜುಲೈ 01 ರಿಂದ 15ರ ವೆರೆಗೆ CBSE 10th ಮತ್ತು ಪಿಯುಸಿಯ ಉಳಿದ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್ ಪೊಕ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.
https://twitter.com/DrRPNishank/status/1258723184209100800