Corona: ಬೆಂಗಳೂರಿನ 7ರಿಂದ 10 ಏರಿಯಾ ಸೀಲ್ ಡೌನ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾರಕ ಕೊರೊನಾ ವೈರಸ್ ದಿನೇ ದಿನೇ ಹೆಚ್ಚುತ್ತಿದ್ದು, ಜನರಲ್ಲಿ ಭಾರಿ ಆತಂಕ ಮೂಡಿಸಿದೆ. ಹೀಗಾಗಿ ಕೊರೋನಾ ಸೋಂಕು ಹೆಚ್ಚಿರುವ ನಗರದ 8ರಿಂದ 10 ಏರಿಯಾಗಳನ್ನ ಸೀಲ್ ಡೌನ್ ಮಾಡಲು ಬಿಬಿಎಂಪಿ ನಿರ್ಧರಿಸಿದೆ.
ಈ ಕುರಿತು ಬಿಬಿಎಂಪಿ ಆಯುಕ್ತರಾದ ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಕೊರೋನಾ ಸೋಂಕು ಹೆಚ್ಚಿರುವ ಏರಿಯಾಗಳನ್ನ ಸೀಲ್ ಡೌನ್ ಮಾಡಲಾಗುತ್ತದೆ. 7 ರಿಂದ 8 ಏರಿಯಾಗಳು ಸೀಲ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸೀಲ್ ಡೌನ್ ಮಾಡದೇ ಬೇರೆ ಮಾರ್ಗವಿಲ್ಲ. ಈ ಸೀಲ್ ಡೌನ್ ಗೆ ಸಿಎಂ ಒಪ್ಪಿಗೆ ನೀಡಿದ್ದಾರೆ.
ಹಾಗೆಯೇ ಸೀಲ್ ಡೌನ್ ಆದ ಪ್ರದೇಶಗಳಲ್ಲಿ ಎಲ್ಲವೂ ಬಂದ್ ಆಗಲಿದೆ. ದೇಗುಲ, ಚರ್ಚ್, ಮಸೀದಿ ಎಲ್ಲವೂ ಬಂದ್ ಆಗಲಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ. ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 196 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕೊರೊನಾ ನಿಯಂತ್ರಣಕ್ಕೆ ಸೀಲ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಕೊರೋನಾ ನಿಯಂತ್ರಣಕ್ಕೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದೇವೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಕೊರೋನಾ ಎದುರಿಸಲು ಮೊದಲು ಅಷ್ಟೊಂದು ವ್ಯವಸ್ಥೆ ಮಾಡಿಕೊಂಡಿರಲಿಲ್ಲ. ಈಗ ಕೊರೋನಾ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಹೀಗಾಗಿ ಜನರು ಆತಂಕಪಡುವುದು ಬೇಡ. ಕೊರೋನಾ ನಿಯಂತ್ರಣ ಮಾಡುತ್ತೇವೆ ಎಂದು ತಿಳಿಸಿದರು.
ಮೊದಲು ಎಲ್ಲರಿಗೂ ಒಂದೇ ಕಡೆ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಕೊರೋನಾ ಲಕ್ಷಣ ಇಲ್ಲದವರಿಗೆ ಮತ್ತು ಕೊರೋನಾ ಲಕ್ಷಣ ಇರುವವರಿಗೆ ಪ್ರತ್ಯೇಕ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬೆಡ್ ಕೊರತೆ ಇಲ್ಲ ಎಂದು ಡಿಸಿಎಂ ಹೇಳಿದರು.

