Corona : Lock down ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳ ಸಭೆ ಕರೆದ ಸಿದ್ದು…

ಲಾಕ್‍ಡೌನ್ ಪರಿಣಾಮ ಕಾರ್ಮಿಕ ವರ್ಗ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಸಭೆಯ ಪ್ರತಿಪಕ್ಷ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಗುರುವಾರ ವಿರೋಧ ಪಕ್ಷಗಳ ನಾಯಕರು ಸಭೆ ಕರೆದಿದ್ದಾರೆ. ಇದೇ ಸಭೆಗೆ ಅವರು  ರೈತ ಸಂಘಟನೆಗಳ ಪ್ರಮುಖರನ್ನು ಅವ್ಹಾನಿಸಿದ್ದಾರೆ.

ಕಾಂಗ್ರೆಸ್, ಜೆಡಿಎಸ್, ಜೆಡಿಯು, ಸಿಪಿಐಎಂ, ಸಿಪಿಐಎಂ ಹಾಗೂ ವಿವಿಧ ರೈತ ಸಂಘಟನೆಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವಂತೆ ಸಿದ್ದರಾಮಯ್ಯ ಅವರು ಎಲ್ಲ ನಾಯಕರಿಗೂ ಪತ್ರ ಬರೆದು ಮನವಿ ಮಾಡಿದ್ದಾರೆ. ನಿತ್ಯದ ದುಡಿಮೆಯನ್ನು ಆಧರಿಸಿ ಬದುಕುತ್ತಿರುವ, ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವ ವಿವಿಧ ಸಮುದಾಯಗಳವರು ಲಾಕ್‌ಡೌನಿನಿಂದಾಗಿ ಪರಿತಪಿಸುತ್ತಿದ್ದಾರೆ.

ಅಟೋ, ಟ್ಯಾಕ್ಸಿ ಚಾಲಕರು ಮತ್ತು ಬೀದಿ ಬದಿಯ ವ್ಯಾಪಾರಿಗಳ ಬದುಕು ದುಸ್ತರವಾಗಿರುವುದರ ಕುರಿತು ಈಗಾಗಲೇ  ಮುಖ್ಯಮಂತ್ರಿಗಳೊಂದಿಗೆ ಹಲವು ಸಭೆಗಳನ್ನು ಮಾಡಿ ಸರ್ಕಾರಕ್ಕೆ ಮನವಿಗಳನ್ನು ನೀಡಲಾಗಿದೆ. ಮತ್ತೊಂದೆಡೆ ಲಾಕ್‍ಡೌನ್‍ನಿಂದಾಗಿ ರೈತರ ಸ್ಥಿತಿಯೂ ಶೋಚನೀಯವಾಗಿದೆ. ಬೆಳೆದ ಬೆಳೆಗಳನ್ನು ಖರೀದಿ ಮಾಡುವವರಿಲ್ಲದೆ, ಸಾಗಣೆ, ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ರೈತರು ಬೀದಿಪಾಲಾಗುವ ಹಂತ ತಲುಪಿದ್ದಾರೆ. social media ದಲ್ಲಿ ಅನೇಕ ರೈತರು ಮತ್ತು ರೈತ ಮಹಿಳೆಯರು ತಮ್ಮ ಸಕಷ್ಟಗಳನ್ನು ಹಂಚಿಕೊಳ್ಳುತ್ತಿದ್ದಾರೆ, ಎಲ್ಲೊ ಒಬ್ಬರಿಗೆ CM ಸ್ಪಂದಿಸುತ್ತಿದ್ದಾರೆ, ಆದರೆ ಅನೇಕ ಸಚಿವರು ಕಣ್ಣುಮುಚ್ಚಿ ಕುಳಿತ್ತದ್ದಾರೆ. ಈ ಎಲ್ಲ ಸಮಸ್ಯಗಳ ಬಗ್ಗೆ ಚರ್ಚಿಸುವ ಅಗತ್ಯದ ಬಗ್ಗೆ ಮಾಜಿ CM ಸಿದ್ದರಾಮಯ್ಯ ಪತ್ರದಲ್ಲಿ ಹೆಳಿದ್ದಾರೆ..

ಅನೇಕ ಕಡೆಗಳಲ್ಲಿ ರೈತರು ಬೆಳೆದ ಬೆಳೆಗಳನ್ನು ರಸ್ತೆಗೆ ಸುರಿಯುತ್ತಿರುವ ಬಗ್ಗೆ, ಅವರ ಜಮೀನುಗಳಲ್ಲಿಯೇ ಹಾಳಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ನಿತ್ಯ ವರದಿಗಳು ಬರುತ್ತಿವೆ. ಈ ನಡುವೆ ಪೂರ್ವ ಮುಂಗಾರು ಬಿತ್ತನೆಗೆ ಮುಂದಾಗಿರುವ ರೈತರಿಗೆ ಸಮರ್ಪಕ ಪ್ರಮಾಣದಲ್ಲಿ ಗುಣಮಟ್ಟದ ಬೀಜ, ಗೊಬ್ಬರ ದೊರೆಯದಿರುವ ಕುರಿತು ದೂರುಗಳು ಬರುತ್ತಿವೆ.

ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ತರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು, ಈ ವಿಚಾರದಲ್ಲಿ ಎಲ್ಲ ನಾಯಕರ ಸಲಹೆ, ಸೂಚನೆ ಕೋರಲು ಸಭೆ ಕರೆಯಲಾಗಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights