Corona test : ಪ್ರತಿದಿನಾ 500 ರಿಂದ 2000ಕ್ಕೆ ಕೊರೋನಾ ಪರೀಕ್ಷೆ ಹೆಚ್ಚಳ..

ಕೊರೋನ ವನ್ನು ಬಡಿದೋಡಿಸುವ ಉದ್ದೇಶದಿಂದ ಪ್ರತಿನಿತ್ಯ ರಾಜ್ಯದಲ್ಲಿ 2 ಸಾವಿರ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದೇ ರೀತಿ ಈ ವರೆಗೆ 17 ಸಾವಿರಕ್ಕೂ ಹೆಚ್ಚು ಜನರ ಪರೀಕ್ಷೆ ನಡೆಸಲಾಗಿದೆ. ಪ್ರಾರಂಭದಲ್ಲಿ ದಿನಕ್ಕೆ 500 ಪರೀಕ್ಷೆ ನಡೆಸಲಾಗುತ್ತಿತ್ತು ಈಗ ದಿನಕ್ಕೆ 2000 ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಕೊರೋನಾ ಪರೀಕ್ಷೆ ವಿಚಾರದಲ್ಲಿ ರಾಜ್ಯವು ದೇಶಕ್ಕೆ ಎರಡನೇ ಸ್ಥಾನದಲ್ಲಿದೆ. ಸರಾಸರಿ 43.56 ಪರೀಕ್ಷೆಗಳಲ್ಲಿ ಒಂದು ಪಾಸಿಟಿವ್ ಪ್ರಕರಣ ವರದಿಯಾಗುತ್ತಿದೆ. ಮೊದಲ ಸ್ಥಾನದಲ್ಲಿರುವ ಕೇರಳದಲ್ಲಿ 44.16 ಪರೀಕ್ಷೆಗಳಲ್ಲಿ ಒಂದು ಪಾಸಿಟಿವ್ ಪ್ರಕರಣ ವರದಿಯಾಗುತ್ತಿದೆ ಎಂದು ಉನ್ನತ ಮಟ್ಟದ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಹಾಗೂ ತಜ್ಞ ವೈದ್ಯರ ಜೊತೆ ಸಮಾಲೋಚನೆ ನಡೆಸಲಾಯಿತು.

ಜ್ವರ, ಶೀತ, ಉಸಿರಾಟದ ತೊಂದರೆ ಇರುವವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಯಪಟ್ಟರು. ಪ್ರತಿ ಜಿಲ್ಲೆಯಲ್ಲಿ ಎರಡು ಹಾಗೂ ಪ್ರತಿ ವೈದ್ಯಕೀಯ ಕಾಲೇಜುಗಳಲ್ಲಿ ಒಂದು ಪರೀಕ್ಷಾ ಕೇಂದ್ರ ಸ್ಥಾಪಿಸುವಂತೆ ಐಸಿಎಂಆರ್ ಮಾರ್ಗಸೂಚಿ ಹೊರಡಿಸಿದೆ.

ಈ ನಿಟ್ಟಿನಲ್ಲಿ ಏಪ್ರಿಲ್ ಅಂತ್ಯದೊಳಗೆ ಇನ್ನೂ 10 ಪ್ರಯೋಗಾಲಯಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಭೆಗೆ ತಿಳಿಸಲಾಯಿತು. ಲಾಕ್ ಡೌನ್ ಸಡಿಲಗೊಳಿಸಿದ ನಂತರ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಅವುಗಳನ್ನು ನಿಭಾಯಿಸುವ ಸಿದ್ಧತೆ ಮಾಡಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಲಾಕ್ ಡೌನ್ ಸಡಿಲಗೊಳಿಸುವ ಸಂದರ್ಭದಲ್ಲಿ ಥರ್ಮಲ್ ಸ್ಕಾನರ್ ಮೂಲಕ ತಮ್ಮ ಸಿಬ್ಬಂದಿಯಲ್ಲಿ ರೋಗ ಲಕ್ಷಣವಿದೆಯೇ ಎಂದು ಕಂಫೆನಿಗಳು ದಿನಾಲೂ ಪರೀಕ್ಷೆ ಮಾಡಬೇಕಿದೆ ಎಂದು ತಜ್ಞರು ಅಭಿಪ್ರಾಯಪಟ್ಟರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights