Coronavirus : ಸೋಂಕು ಹರಡುವಿಕೆ ತಡೆಗಟ್ಟಲು ಮಾರ್ಚ್ 31ವರೆಗೆ 9 ಜಿಲ್ಲೆಗಳು ಲಾಕ್‌ಡೌನ್…

ಕೊರೋನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸೇರಿ 9 ಜಿಲ್ಲೆಗಳಲ್ಲಿ ಎಲ್ಲ ಸೇವೆಗಳನ್ನೂ ಬಂದ್ ಮಾಡಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಬೆಂಗಳೂರು, ಬೆಂ. ಗ್ರಮಾಂತರ, ಮೈಸೂರು, ಧಾರವಾಡ, ಮಂಗಳೂರು, ಕಲಬುರ್ಗಿ, ಬೆಳಗಾವಿ, ಚಿಕ್ಕಬಳ್ಳಾಪುರ, ಕೊಡಗಿನಲ್ಲಿ ಲಾಕ್‌ಡೌನ್

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಧಾರವಾಡ, ಮೈಸೂರು, ಕೊಡಗು, ಕಲಬುರ್ಗಿ, ಬೆಳಗಾವಿ, ಮಂಗಳೂರು ಜಿಲ್ಲೆಗಳು ಮಾರ್ಚ್ 31 ವರೆಗೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿವೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳನ್ನು ಈ ಒಂಬತ್ತು ಜಿಲ್ಲೆಗಳಲ್ಲಿ ಸ್ಥಗಿತಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ‌ನಾಳೆಯೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರದ್ದಾಗಲಿದ್ದು, ಎಸಿ ಬಸ್ ಸೇವೆಯನ್ನು 31 ರವರೆಗೆ ತಡೆ ಹಡಿಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ 9 ಜಿಲ್ಲೆಗಳಲ್ಲಿ ಸಾರಿಗೆ ಸೇರಿದಂತೆ ಯಾವುದೇ ವ್ಯವಸ್ಥೆ ಇರುವುದಿಲ್ಲ. ಈ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುತ್ತದೆ. ನಾಳೆ ವಿಧಾನಮಂಡಲದ ಅಧಿವೇಶನ ಮುಂದುವರೆಯಲಿದೆ.

ಅಲ್ಲದೇ ಈ 9 ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆ‌ ಯಾವುದೇ ಚಟವಟಿಕೆಗಳಿಗೆ ನಿರ್ಭಂಧ ಮಾಡಲಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪಿಯುಸಿ ಪರೀಕ್ಷೆ ಮುಂದುವರಿಯಲಿದೆ. ಅಲ್ಲದೇ ರಾಜ್ಯದ ಗಡಿ ಭಾಗಗಳನ್ನು ಬಂದ್‌ ಮಾಡಲಾಗಿದ್ದು, ಕೆಎಸ್ಸಾರ್ಟಿಸಿ ಬಸ್‌ ಸೇವೆ ರದ್ದಾಗಿದೆ.

ಸಿಎಂ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತಾದ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂಬುದಾಗಿ ಬೊಮ್ಮಾಯಿ ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights