Covid 19 : ಬೆಂಗಳೂರಿನ 2ಸ್ಥಳದಲ್ಲಿ ಸೀಲ್‌ಡೌನ್, ರಾಜ್ಯದಲ್ಲಿ ಕೊರೋನಾ ಡಬಲ್ ಸೆಂಚುರಿ..

ಮೈಸೂರು ಒಂದರಲ್ಲಿಯೇ ಐದು ಮಂದಿ ಕೊರೋನಾ ಸೋಂಕಿತರ ಪತ್ತೆಯಾಗುವ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು ಹತ್ತು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಬೆಳವಣಿಗೆಯಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 207ಕ್ಕೇರಿದೆ. ಇದೇ ವೇಳೇ ಸೋಂಕಿತರ ಸಂಖ್ಯೆ ಹೆಚ್ಚಿರುವ ಕಾರಣ ಬೆಂಗಳುರಿನ ಎರಡು ಪ್ರದೇಶಗಳನ್ನು ಸಂಪೂರ್ಣವಾಗಿ ಸೀಲ್‌ಡೌನ್ ಮಾಡಲಾಗಿದೆ.

ಈ ಪ್ರದೇಶಗಳಲ್ಲಿ ಹೊಸದಾಗಿ ಐದು ಕೊರೋನಾ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಪಾದರಾನಯನಪುರ ಮತ್ತು ಬಾಪೂಜಿನಗರ ಪ್ರದೇಶಗಳಿಗೆ ಕೊರೋನಾ ಸೀಲ್ ಜಡಿಯಲಾಗಿದೆ. ಯಾವುದೇ ಕಾರಣಕ್ಕೂ ಈ ಪ್ರದೇಶಗಳ ಜನ ರಸ್ತೆಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಅಗತ್ಯ ವಸ್ತುಗಳನ್ನು ಜನರ ಮನೆ ಬಾಗಿಲಿಗೇ ಪೂರೈಸುವ ವ್ಯವಸ್ಥೆ ಮಾಡಲಾಗಿದೆ. ಈ ಎರಡೂ ಪ್ರದೇಶಗಳಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೀಲ್‌ಡೌನ್ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್‍ ಹೇಳಿದ್ದಾರೆ.

ಬಾಪೂಜಿ ನಗರ ವಾರ್ಡ್ ಮತ್ತು ಪಾದರಾಯನಪುರದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಸಂಪೂರ್ಣ ಸೀಲ್ ಡೌನ್ ಮಾಡಲು ಯೋಜಿಸಿದೆ. ಬಿಬಿಎಂಪಿ ಅಗತ್ಯವಿರುವ ಎಲ್ಲಾ ವಸ್ತುಗಳ ಸರಬರಾಜು ಮಾಡಲಿದೆ ಎಂದಿದ್ದಾರೆ. ಇದೇ ವೇಳೆ ಸೋಂಕಿತರ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆಂಬ ವರದಿಗಳ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ಮತ್ತು ದಕ್ಷಣ ವಲಯಸದ ಅನೇಕ ಪ್ರದೇಶಗಳನ್ನು ಸಹ ಸೀಲ್‌ಡೌನ್‌ಗೆ ಒಳಪಡಿಸುವ ಚಿಂತನೆಯೂ ನಡೆದಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 10 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ, ಈ ಪೈಕಿ ಮೈಸೂರಿನಲ್ಲಿಯೇ ಐದು ಮಂದಿ ಸೋಂಕಿತರಿದ್ದರೇ ಬೆಂಗಳೂರು ನಗರ, ಗ್ರಾಮಾಂತರದಲ್ಲಿ ತಲಾ 2 ಹಾಗೂ ಕಲಬುರ್ಗಿಯಲ್ಲಿ ಓರ್ವ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights