Good News : ರಾಜ್ಯದಲ್ಲಿ ಮೊದಲ ಬಾರಿಗೆ ಪಾಸ್ಮಾ ಥೆರಪಿ ಯಶಸ್ವಿ….!

ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ನಿಯಂತ್ರಣಕ್ಕೆ ತರಲು ಇರುವ ಒಂದೇ ಒಂದು ಚಿಕಿತ್ಸೆ ಅಂದ್ರೆ ಅದು ಪಾಸ್ಮಾ ಥೆರಪಿ. ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಪಾಸ್ಮಾ ಥೆರಪಿ ಯಶಸ್ವಿಯಾಗಿದೆ.

ಹೌದು…. ಐಸಿಎಂಆರ್ ಅನುಮತಿ ಪಡೆದ ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಎಂದೇ ಖ್ಯಾತಿಯ ಕಿಮ್ಸ್ ಆಸ್ಪತ್ರೆ ಪಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದೆ. 65 ವರ್ಷದ ಸೋಂಕಿತ (ಪಿ-2710) ವ್ಯಕ್ತಿಗೆ ಪ್ಲಾಸ್ಮಾ ಥೆರಪಿ ಮಾಡಿ ವೈದ್ಯರ ತಂಡ ಯಶಸ್ಸು ಸಾಧಿಸಿದೆ ಎಂದು ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಹೇಳಿದ್ದಾರೆ. ಆರಂಭದಲ್ಲಿ ಸೋಂಕಿನಿಂದ ಗುಣಮುಖರಾದವರು ಪ್ಲಾಸ್ಮಾ ನೀಡಲು ಹಿಂದೇಟು ಹಾಕುತ್ತಿದ್ದರು. ಹೀಗಾಗಿ ಪ್ಲಾಸ್ಮಾ ಥೆರಪಿ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ಗುಣಮುಖರನ್ನು ಮನವೊಲಿಸುವಲ್ಲಿಯೂ ವೈದ್ಯರು ಯಶಸ್ವಿಯಾಗಿದ್ದಾರೆ. ಬಳಿಕ ಸೋಂಕಿತರಿಗೆ ಥೆರಪಿ ನೀಡಿದ್ದಾರೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು ಇಂದು ಒಂದೇ ದಿನ 230  ಪ್ರಕರಣಗಳ ಪೈಕಿ 200 ಸೋಂಕಿತರು ಉಡುಪಿಯಲ್ಲಿ ದಾಖಲಾಗಿದ್ದಾರೆ. ಹೀಗಾಗಿ ಜನರಲ್ಲಿ ಆತಂಕ ಹೆಚ್ಚಾಗುತ್ತಿರುವ ಬೆನ್ನಲ್ಲೆ ನೆಮ್ಮದಿಯ ವಿಚಾರವೊಂದು ಧೈರ್ಯ ತಂದಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights