Karnataka Budget : ಕುಡಿಯುವ ನೀರು, ಮಹದಾಯಿ, ಎತ್ತಿನಹೊಳೆಗೆ BSY ಒತ್ತು…

ನಿರೀಕ್ಷೆಯಂತೆಯೇ ಮುಖಯಮಂತ್ರಿ ಯಡಿಯೂರಪ್ಪ ತಮ್ಮ ಆಯವ್ಯವದಲ್ಲಿ ಮಹದಾಯಿ ಮತ್ತು ಎತ್ತಿನಹೊಳೆ ಯೋಜನೆಗಳಿಗೆ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ.

ಮಹದಾಯಿ ವಿಚಾರವಾಗಿ ರಾಜ್ಯಕ್ಕೆ ಜಯ ದೊರೆತಿರುವ ಬೆನ್ನಲ್ಲಿಯೇ ನ್ಯಾಯಾಧಿಕರಣದ ತೀರ್ಪಿನಂತೆ ತನ್ನ ಪಾಲಿನ ನೀರನ್ನು ಸಮರ್ಥವಾಗಿ ಬಳಸಿಕೊಳ್ಳುವ ಸಲುವಾಗಿ ಯೋಜನೆ ಹಮ್ಮಿಕೊಳ್ಳಲಾಗಿದೆ.

ಮಹದಾಯಿ ಯೋಜನೆಯಡಿ ಕಳಸಾ ಮತ್ತು ಬಂಡೂರಿ ನಾಲಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 500 ಕೋಟಿ ರೂ. ಅನುದಾನ ಮೀಸಲಿಡುವುದಾಗಿ ಯಡಿಯೂರಪ್ಪ ಗುರುವಾರ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

ಇದೇ ವೇಳ ಎತ್ತಿನಹೊಳೆ ಯೋಜನೆಗೆ 1500 ಕೋಟಿ ರೂ. ಅನುದಾನವನ್ನು ಸಹ ಮೀಸಲಿಡಲಾಗಿದೆ. ಮೊದಲನೆಯ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮುಂದಿನ ಮುಂಗಾರು ಹಂಗಾಮಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ರಾಜ್ಯದಲ್ಲಿ 5000 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಏತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುವುದಾಗಿ ಸಹ ಬಿಎಸ್ವೈ ಭರವಸೆ ನೀಡಿದ್ದಾರೆ.

ರಾಜ್ಯದ ಎಲ್ಲ ರೈತರಿಗೆ ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಘೋಷಿಸಿರುವುದರ ಜೊತೆಗೇ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ 4000 ರೂ. ಹೆಚ್ಚುವರಿ ನೆರವು ನೀಡುವ ಯೋಜನೆಯನ್ನು ಮುಂದುವರೆಸಲು 2600 ಕೋಟಿ ರೂ. ಅನುದಾನ ನೀಎಲಾಗಿದೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights